ಗಿಚ್ಚಿ ಗಿಲಿಗಿಲಿ ಶೋನಲ್ಲಿ ಬಿಗ್‌ಬಾಸ್ ಸ್ಟಾರ್‌ಗಳು – ಡ್ರೋನ್ ಪ್ರತಾಪ್, ತುಕಾಲಿ ಸಂತು, ಇಶಾನಿಗೆ ಚಾನ್ಸ್

ಗಿಚ್ಚಿ ಗಿಲಿಗಿಲಿ ಶೋನಲ್ಲಿ ಬಿಗ್‌ಬಾಸ್ ಸ್ಟಾರ್‌ಗಳು – ಡ್ರೋನ್ ಪ್ರತಾಪ್, ತುಕಾಲಿ ಸಂತು, ಇಶಾನಿಗೆ ಚಾನ್ಸ್

ಬಿಗ್ ಬಾಸ್ ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ವಾಹಿನಿಯ ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಟಾಲಿವುಡ್ ಸ್ಟಾರ್ ಪ್ರಭಾಸ್ ಗೆ ಯುರೋಪ್‌ನಲ್ಲಿ ಟ್ರೀಟ್‌ಮೆಂಟ್ – ಮಾರ್ಚ್ ತನಕ ಸಿನಿಮಾ ಕೆಲಸ ಬಂದ್

ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ ಚಿತ್ರೀಕರಣ ಆರಂಭವಾಗಿದೆ. ಈ ಬಾರಿಯ ಗಿಚ್ಚಿ ಗಿಲಿಗಿಲಿಯಲ್ಲಿ ಬಿಗ್‌ಬಾಸ್ ಸ್ಟಾರ್‌ಗಳು ವೀಕ್ಷಕರನ್ನು ನಕ್ಕು ನಗಿಸಲು ಬರುತ್ತಿದ್ದಾರೆ. ಅದರಲ್ಲೂ ಬಿಗ್‌ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ಗಿಚ್ಚಿ ಗಿಲಿಗಿಲಿಯ ಸೆಂಟರ್ ಆಫ್ ಅಟ್ರಾಕ್ಷನ್ ಆಗಲಿದ್ದಾರೆ. ಇವರಲ್ಲದೇ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಫೆಬ್ರವರಿ 1ರಿಂದಲೇ ಇವರೆಲ್ಲಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಖ್ಯಾತ ನಟಿ ಶ್ರುತಿ, ಕೋಮಲ್, ಸಾಧು ಕೋಕಿಲಾ ಗಿಚ್ಚಿಗಿಲಿಗಿಲಿ ಶೋನ ನಿರ್ಣಾಯಕರಾಗಿದ್ದಾರೆ. ಡ್ರೋನ್ ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಹಲವಾರು ರೀತಿಯಲ್ಲಿ ಅವರ ಮೇಲೆ ಆರೋಪ ಮಾಡಲಾಗಿತ್ತು. ಈಗ ಎಲ್ಲದಕ್ಕೂ ಪ್ರತಾಪ್ ಉತ್ತರ ನೀಡಿದ್ದಾರೆ.  ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್, ಕೆಲವು ವಿಷಯಗಳ ಬಗ್ಗೆ ಮಾತನಾಡಬಾರದು. ಸಕಾರಾತ್ಮಕ ವಿಷಯಗಳ ಬಗ್ಗೆ ಮಾತನಾಡೋಣ. ಸಾರಂಗ ಅವರ ಆರೋಪದ ಬಗ್ಗೆ ಶೀಘ್ರದಲ್ಲೇ ನಾವು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ ಪ್ರತಾಪ್.

ಬಿಗ್‌ಬಾಸ್ ಶೋನಲ್ಲಿ ಡ್ರೋನ್ ಪ್ರತಾಪ್ ಅತಿ ಹೆಚ್ಚು ವೋಟಿಂಗ್ ಪಡೆದಿದ್ದರು. ಸೋಶಿಯಲ್ ಮೀಡಿಯಾದಲ್ಲೂ ಕೂಡಾ ಡ್ರೋನ್ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿದ್ದರು. ಇದೇ ಜನಪ್ರಿಯತೆ ಡ್ರೋನ್ ಅವರನ್ನು ಕಿರುತೆರೆಗೆ ಬರುವಂತೆ ಮಾಡಿರಬಹುದು.

Sulekha