ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್ – ಶುಭ ಹಾರೈಸಿದ ತಾರೆಯರು
ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಡ್ಯದ ಭಾನುಶ್ರೀ ಜೊತೆ ಸರಳವಾಗಿ ಮದುವೆಯಾಗಿದ್ದಾರೆ.
ಪ್ರಥಮ್ ಹಾಗೂ ಭಾನುಶ್ರೀ ಅವರದ್ದು ಅಪ್ಪಟ ಅರೇಂಜ್ಡ್ ಮ್ಯಾರೇಜ್. ಕುಟುಂಬಸ್ಥರು ಹಾಗೂ ಹಿರಿಯರು ನಿಶ್ಚಿಯಿಸಿದಂತೆ ಪ್ರಥಮ್ ಮತ್ತು ಭಾನುಶ್ರೀ ಸರಳವಾಗಿ ವಿವಾಹವಾಗಿದ್ದಾರೆ. ಈ ಹಿಂದೆ ಹಲವು ಸಂದರ್ಶನಗಳಲ್ಲಿ ಪ್ರಥಮ್ ನಾನು ಸರಳವಾಗಿ ಮದುವೆಯಾಗುತ್ತೇನೆ ಎಂದು ಹೇಳಿಕೊಂಡಿದ್ದರು. ಅದರಂತೆ ಸರಳವಾಗಿ ಮದುವೆಯಾಗಿದ್ದಾರೆ. ನವದಂಪತಿಗೆ ಶುಭ ಹಾರೈಸಲು ಲವ್ಲಿ ಸ್ಟಾರ್ ಪ್ರೇಮ್, ಧ್ರುವ ಸರ್ಜಾ, ಗಾಯಕಿ ಇಶಾನಿ, ರಕ್ಷಕ್ ಬುಲೆಟ್ ಸೇರಿದಂತೆ ಹಲವಾರು ತಾರೆಯರು ಆಗಮಿಸಿದ್ದರು.
ಇದನ್ನೂ ಓದಿ: ರಣ್‌ಬೀರ್‌ಗೆ ಕನ್ನಡ ಹೇಳಿಕೊಟ್ಟ ರಶ್ಮಿಕಾ – ಇವಳು ಕೊಡಗಿನ ಕುವರಿ ಅಲ್ಲ ತೆಲುಗು ಅಮ್ಮಾಯಿ ಎಂದು ಕಿಡಿ
ಕಳೆದ ವಾರವಷ್ಟೇ ಇವರು ಸೋಷಿಯಲ್ ಮೀಡಿಯಾದಲ್ಲಿ, ‘ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಾಚಾರಕ್ಕೆ ಕರೆಯೋದಿಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ. ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ಪ್ರಥಮ್ ಬರೆದುಕೊಂಡಿದ್ದಾರೆ.