ಬಿಹಾರದಲ್ಲಿ ಮೊದಲ ಹಂತದ ಮತದಾನ ಆರಂಭ – ಮತದಾರರಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದೇನು?

ಬಿಹಾರದಲ್ಲಿ ಮೊದಲ ಹಂತದ ಮತದಾನ ಆರಂಭ – ಮತದಾರರಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದೇನು?

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಈಗಾಗಲೇ ಆರಂಭವಾಗಿದೆ. 8 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: ದೊಡ್ಮನೆಯಲ್ಲಿ ಗಿಲ್ಲಿ-ಕಾವ್ಯಗೆ ಅಗ್ನಿ ಪರೀಕ್ಷೆ! – ಮನೆಯವರ ಪತ್ರ.. ಫ್ರೆಂಡ್‌ಶಿಪ್‌ ಮುಂದುವರಿಯುತ್ತಾ?

ಈ ಬಗ್ಗೆ ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. ಇದೇ ಸಂದರ್ಭದಲ್ಲಿ ಪ್ರಥಮ ಬಾರಿಗೆ ಮತ ಚಲಾಯಿಸಲಿರುವ ರಾಜ್ಯದ ನನ್ನ ಎಲ್ಲಾ ಯುವ ಮಿತ್ರರಿಗೆ ನನ್ನ ವಿಶೇಷ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಅಂದ್ಹಾಗೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ 8 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಆರಂಭವಾಗಿದೆ. ಬಿಗಿ ಭದ್ರತಾ ವ್ಯವಸ್ಥೆಗಳೊಂದಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಸಾವಿರಾರು ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ತೇಜಸ್ವಿ ಸಹೋದರ ತೇಜ್ ಪ್ರತಾಪ್ ಯಾದವ್ (ಜನಶಕ್ತಿ ಜನತಾ ದಳ), ಬಿಜೆಪಿಯ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಗಾಯಕಿ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್  ಸೇರಿದಂತೆ 1,314 ಅಭ್ಯರ್ಥಿಗಳ ಭವಿಷ್ಯವನ್ನು 3.75 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

Shwetha M