ಬಿಟ್ ಕಾಯಿನ್ ಪ್ರಕರಣ – ಇಬ್ಬರನ್ನು ಅರೆಸ್ಟ್ ಮಾಡಿದ ಎಸ್‌ಐಟಿ!
ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್! – ಹೊಸ ಪಿಂಚಣಿ ಯೋಜನೆ ರದ್ದು!
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದವರನ್ನೆಲ್ಲಾ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದರು. ಈ ಪೈಕಿ ಇಬ್ಬರು ಪೊಲೀಸರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್ಪರ್ಟ್ ಸಂತೋಷ್ ಎಂಬವರನ್ನು ಬಂಧಿಸಿದ್ದು, ಗುರುವಾರ ಮಧ್ಯಾಹ್ನ ಮೂರು ಘಂಟೆಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಎಸ್ಐಟಿ ಸಿದ್ಧತೆ ನಡೆಸುತ್ತಿದೆ.
ಬಿಟ್‌ಕಾಯಿನ್ ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಅರೋಪ ಮಾಡಿತ್ತು. ಎಸ್ಐಟಿ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಇದುವರೆಗೆ ಯಾರನ್ನೂ ಅರೆಸ್ಟ್ ಮಾಡಿರಲಿಲ್ಲ. ಆದರೆ ಇದೀಗ ತನಿಕೆ ನಡೆಸಿರುವ ಅಧಿಕಾರಿಗಳು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಕೇವಲ ಮೂರೂವರೆ ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ವರ್ಗಾವಣೆ ಮಾಹಿತಿ ಲಭ್ಯವಾಗಿದೆ.
ಸದ್ಯ ಒಂದೇ ಒಂದು ಬಿಟ್ ಕಾಯಿನ್ಗಳನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿಲ್ಲ. ತಾಂತ್ರಿಕ ವಸ್ತುಗಳು (ಎವಿಡೆನ್ಸ್ಗಳನ್ನು ದುರುಪಯೋಗ ಮಾಡಿದ್ದಾರೆ) ಎಂಬುದು ತನಿಖೆ ವೇಳೆ ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ಸಿಐಟಿ ನಡೆಸುತ್ತಿದೆ.