ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ದೃಢ – ವರದಿ ಸಮೇತ ಬಹಿರಂಗಪಡಿಸಿದ ಬಿಜೆಪಿ!
ರಾಜ್ಯ ಸಭೆ ಚುನಾವಣೆಯ ಫಲಿತಾಂಶದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಈ ಪ್ರಕರಣದ ಸಂಬಂಧ ತನಿಖೆ ನಡೆಸಲಾಗುತ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪರೀಕ್ಷೆಯಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿರುವುದು ದೃಢವಾಗಿದೆ ಎಂದು ಬಿಜೆಪಿ ಹೇಳಿದೆ.
ಇದನ್ನೂ ಓದಿ: ಕನಸು ನನಸಾದ ಖುಷಿಯಲ್ಲಿ ತುಕಾಲಿ ಸಂತೋಷ್ – ಮನೆಗೆ ಹೊಸ ಅತಿಥಿಯ ಆಗಮನ
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಖಾಸಗಿ ಕ್ಲೂ4 ಎವಿಡೆನ್ಸ್ ಫಾರೆನ್ಸಿಕ್ ಸಂಸ್ಥೆಯ FSL ವರದಿಯನ್ನು ಪೋಸ್ಟ್ ಮಾಡಿದೆ. ಈ ವರದಿ ಪ್ರಕಾರ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ದೃಢ. ವಿಡಿಯೋ ಅಸಲಿಯತ್ತು ಎಂದು ಹೇಳಿದೆ. ಈ ವರದಿಯನ್ನು FSL ತಜ್ಞ ಫಣೀಂದ್ರ ಅವರು ದೃಢ ಪಡಿಸಿದ್ದಾರೆ. ಕಾಂಗ್ರೆಸ್ನವರು ಸುಳ್ಳು ಸುದ್ದಿ ಸೃಷ್ಟಿಕರ್ತರು. ಹೀಗಾಗಿ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ನವರು ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ‘ನಾಸೀರ್ ಸಾಬ್ ಜಿಂದಾಬಾದ್’ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವಿಟ್ನಲ್ಲಿ ಹೇಳಿದೆ.