ಯಾವ ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು – ಸಭೆಯಲ್ಲಿ ಯಾರ್ಯಾರ ಬಗ್ಗೆ ಚರ್ಚೆ..?

ಯಾವ ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು – ಸಭೆಯಲ್ಲಿ ಯಾರ್ಯಾರ ಬಗ್ಗೆ ಚರ್ಚೆ..?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು  ಅಭ್ಯರ್ಥಿಗಳ ಹೆಸರನ್ನೂ ಘೋಷಣೆ ಮಾಡಿವೆ. ಆದರೆ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿದ್ದು ಸಾಲು ಸಾಲು ಸಭೆ ನಡೆಸಲಾಗ್ತಿದೆ. ನಾಯಕರ ಬಣ ಬಡಿದಾಟವೇ ಬಿಜೆಪಿಗೆ ಸವಾಲ್ ಆಗಿದೆ.

ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ದ ಕೇಸ್

ಅಭ್ಯರ್ಥಿಗಳ ಆಯ್ಕೆಗೆ ವಿನೂತನ ಮಾದರಿ ಅನುಸರಿಸಿದ್ದ ಬಿಜೆಪಿ, ಕಳೆದ ಶುಕ್ರವಾರ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರಿಂದ ಮತದಾನದ ಮೂಲಕ ಅಭ್ಯರ್ಥಿಗಳ ಹೆಸರುಗಳನ್ನು  ಸಂಗ್ರಹಿಸಲಾಗಿತ್ತು. ಬಳಿಕ ಶನಿವಾರ ಮತ್ತು ಭಾನುವಾರ ಎಲ್ಲ ಜಿಲ್ಲೆಗಳ ಕೋರ್‌ ಕಮಿಟಿಗಳ ಸದಸ್ಯರನ್ನು ಬೆಂಗಳೂರಿಗೆ ಕರೆಸಿಕೊಂಡು ಚರ್ಚೆ ನಡೆಸಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಿರುವ ಬೆಂಗಳೂರೇ ನಿರ್ಣಾಯಕವಾಗಿದೆ. ಹೀಗಾಗಿ ಬೆಂಗಳೂರಿನ ಯಾವ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂದು ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಕೆಲವು ಕ್ಷೇತ್ರಗಳಿಗೆ ಒಂದು ಇನ್ನು ಕೆಲವು ಕ್ಷೇತ್ರಗಳಿಗೆ ಇಬ್ಬರಿಂದ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಇನ್ನು ಬೆಳಗಾವಿಯ ಅಥಣಿ ಕ್ಷೇತ್ರದಲ್ಲಿ ಮಹೇಶ್‌ ಕುಮಟಳ್ಳಿಗೆ ಟಿಕೆಟ್ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಕುಮಟಳ್ಳಿ ಪರ ಬಲವಾಗಿ ನಿಂತು, ಕೋರ್‌ಕಮಿಟಿ ಸಭೆಯಲ್ಲಿ ವಾಗ್ವಾದ ಕೂಡ ನಡೆಸಿದ್ದಾರೆ. ಇನ್ನು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಟಿಕೆಟ್ ನೀಡಲು ಸ್ಥಳೀಯ ಮುಖಂಡರಿಂದ ವಿರೋಧ ವ್ಯಕ್ತವಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಏಪ್ರಿಲ್ 5 ಅಥವಾ 6 ರಂದು ರಾಜ್ಯ ಕೋರ್ ಕಮಿಟಿ ಸಭೆ ನಡೆಯುವ ಸಾಧ್ಯತೆ ಇದೆ. ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

suddiyaana