ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಪತ್ನಿಯ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಕಾರು ಕಳ್ಳತನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಟೊಯೊಟಾ ಫಾರ್ಚೂನರ್ ಕಾರನ್ನು ಕಳ್ಳತನ ಮಾಡಲಾಗಿದೆ. ಮಾರ್ಚ್ 19ರಂದು ಮಧ್ಯಾಹ್ನ 3 ಗಂಟೆ ವೇಳೆಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ – 13 ಕ್ಕೂ ಹೆಚ್ಚು ಮಂದಿಗೆ ಗಾಯ
ಮಾಹಿತಿ ಪ್ರಕಾರ ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ಪಾರ್ಕಿಂಗ್ ಮಾಡಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ, ಪ್ರಯತ್ನಗಳ ಹೊರತಾಗಿಯೂ, ವಾಹನದ ಯಾವುದೇ ಕುರುಹು ಇನ್ನೂ ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
ಕಳ್ಳತನವಾದ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು, ಕಾರನ್ನು ಶೋಧ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.