‘ಹೆಸರಿಗೆ ಖರ್ಗೆ ಅಧ್ಯಕ್ಷ – ನಿರ್ಧಾರಕ್ಕೆ ಗಾಂಧಿ ಕುಟುಂಬ’, ಕಾಂಗ್ರೆಸ್ ವಿರುದ್ಧ ಟ್ವೀಟ್ ಮೂಲಕ ಬಿಜೆಪಿ ಟೀಕೆ
ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರೇ ಎಐಸಿಸಿ ಅಧ್ಯಕ್ಷರಾಗಿದ್ದರೂ, ಕಾಂಗ್ರೆಸ್ ನಾಯಕರು ಮಾತ್ರ ನಿರ್ಧಾರಕ್ಕಾಗಿ ಗಾಂಧಿ ಕುಟುಂಬಕ್ಕೆ ಜೋತು ಬಿದ್ದಿದೆ. ಸ್ವಂತಿಕೆಯನ್ನೇ ಮರೆತು ‘ಜೀ ಹುಜೂರ್’ ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಲೇವಡಿ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ಬಗ್ಗೆ ಸರಣಿ ಟ್ವೀಟ್ ಮಾಡಿದ ಬಿಜೆಪಿ, ಕರ್ನಾಟಕ ಕಾಂಗ್ರೆಸ್ ಪಟಾಲಂ ದಿಲ್ಲಿಯಲ್ಲಿದೆ. ಈಗಲೂ ಕಾಂಗ್ರೆಸ್ ಗಾಂಧಿ ಕುಟುಂಬಕ್ಕೆ ಜೋತು ಬಿದ್ದಿದೆ ಎಂದು ಟ್ವೀಟ್ ಮಾಡುವ ಮೂಲಕ ಟೀಕಿಸಿದೆ.
ಕರ್ನಾಟಕ ಕಾಂಗ್ರೆಸ್ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ @khargeರವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ @INCKarnatakaದ ನಾಯಕರು ಸ್ವಂತಿಕೆಯನ್ನೇ ಮರೆತು “ಜೀ ಹುಜೂರ್” ಸಂಸ್ಕೃತಿಗೆ ಶರಣಾಗಿದ್ದಾರೆ.
1/5— BJP Karnataka (@BJP4Karnataka) December 13, 2022
ಇದನ್ನೂ ಓದಿ : ರಾಜಕೀಯ ಪಕ್ಷಗಳ ದಲಿತ ಪ್ರೀತಿ – ಕಾವೇರಿದ ಕಾಂಗ್ರೆಸ್ & ಬಿಜೆಪಿ ಟ್ವೀಟ್ ವಾರ್
2013 ರಿಂದ 2018ರವರೆಗೆ ಏನಾಗಿತ್ತು ನೆನಪಿಸಿಕೊಳ್ಳಿ. ಕೆಸಿ ವೇಣುಗೋಪಾಲ್ ಎಂ ಪಿ ಎಂಬ ಸೋನಿಯಾ ಗಾಂಧಿಯವರ ಅಂಚೆಯಣ್ಣನ ಪಾದಾರವಿಂದಗಳಿಗೆ ರಾಜ್ಯದ ಅಂದಿನ ಕಾಂಗ್ರೆಸ್ ಸರ್ಕಾರವನ್ನು ಅರ್ಪಿಸಲಾಗಿತ್ತು. ಸಿದ್ದರಾಮಯ್ಯನವರು ಕನ್ನಡ ಅಸ್ಮಿತೆಯನ್ನು ಅವರ ಮುಂದೆ ನೈವೇದ್ಯಕ್ಕಿಟ್ಟಿದ್ದರು. ಈಗ ಅಧಿಕಾರವಿಲ್ಲದಿದ್ದರೂ ಅದೇ ಸಂಸ್ಕೃತಿ ಮರುಕಳಿಸಿದೆ ಎಂದು ಟ್ವೀಟ್ ಮಾಡಿದೆ. “ಇದು ಹೊಸದೆನಲ್ಲ ತಲ ತಲಾಂತರದಿಂದ ನಡೆದು ಬಂದ ಸಂಸ್ಕೃತಿ ಇದಾಗಿದೆ, ಕಾಂಗ್ರೆಸ್ ನಾಯಕರು ಇದರಲ್ಲಿ ಪಾತ್ರದಾರಿ ಮಾತ್ರ, ಸೂತ್ರದಾರಿ ನಾಯಕಿ ಸೋನಿಯಾಗಾಂಧಿ ಅವರೇ. ಅದರಲ್ಲಿ ವಿಶೇಷತೆ ಏನಿಲ್ಲ” ಎಂದು ಬಿಜೆಪಿ ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷದ ಕಾಲೆಳೆದಿದೆ.
2013 ರಿಂದ 2018ರವರೆಗೆ ಏನಾಗಿತ್ತು ನೆನಪಿಸಿಕೊಳ್ಳಿ. @kcvenugopalmp ಎಂಬ ಸೋನಿಯಾ ಗಾಂಧಿಯವರ ಅಂಚೆಯಣ್ಣನ ಪಾದಾರವಿಂದಗಳಿಗೆ ರಾಜ್ಯದ ಅಂದಿನ ಕಾಂಗ್ರೆಸ್ ಸರ್ಕಾರವನ್ನು ಅರ್ಪಿಸಲಾಗಿತ್ತು. @siddaramaiahನವರು ಕನ್ನಡ ಅಸ್ಮಿತೆಯನ್ನು ಅವರ ಮುಂದೆ ನೈವೇದ್ಯಕ್ಕಿಟ್ಟಿದ್ದರು. ಈಗ ಅಧಿಕಾರವಿಲ್ಲದಿದ್ದರೂ ಅದೇ ಸಂಸ್ಕೃತಿ ಮರುಕಳಿಸಿದೆ.
2/5— BJP Karnataka (@BJP4Karnataka) December 13, 2022