ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ಈ ಹುದ್ದೆ ಎಷ್ಟಕ್ಕೆ ಮಾರಾಟವಾಗುತ್ತಿದೆ? – ಕಾಂಗ್ರೆಸ್‌ ಟ್ವೀಟಾಸ್ತ್ರ

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ಈ ಹುದ್ದೆ ಎಷ್ಟಕ್ಕೆ ಮಾರಾಟವಾಗುತ್ತಿದೆ? – ಕಾಂಗ್ರೆಸ್‌ ಟ್ವೀಟಾಸ್ತ್ರ

ಸೋಮವಾರದಿಂದ ಬಜೆಟ್‌ ಅಧಿವೇಶನ ಆರಂಭವಾಗಿದೆ. ಹಾಗಿದ್ದರೂ ಕೂಡ ಬಿಜೆಪಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಪ್ರತಿಪಕ್ಷ ನಾಯಕನ ಸ್ಥಾನ ಅಲಂಕರಿಸುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಅಧಿವೇಶನ ಆರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದ್ದು, ಬಿಜೆಪಿ ಹೈಕಮಾಂಡ್‌ ಸಸ್ಪೆನ್ಸ್‌ ಮುಂದುವರಿಸಿದೆ. ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕಾಂಗ್ರೆಸ್‌ ಆರಂಭದಿಂದಲೂ ಕಾಲೆಳೆಯುತ್ತಲೇ ಬಂದಿದೆ. ಇದೀಗ ರಾಜ್ಯ ಕಾಂಗ್ರೆಸ್‌, ʼಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹೀನಾಯ ಸ್ಥಿತಿಯಲ್ಲಿದೆ! ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ: ಟೊಮ್ಯಾಟೊ, ಬೀನ್ಸ್, ಕ್ಯಾರೆಟ್ ಮತ್ತಷ್ಟು ದುಬಾರಿ – ತರಕಾರಿ ಜೊತೆ ಮೊಟ್ಟೆ, ಮಾಂಸದ ಬೆಲೆಯೂ ಏರಿಕೆ

ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, dear @BJP4Karnataka ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹೀನಾಯ ಸ್ಥಿತಿಯಲ್ಲಿದೆ! ಎಂದು ವ್ಯಂಗ್ಯವಾಡಿದೆ.

ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ರಾಜ್ಯ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ. ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಎಂದು ಟೀಕಿಸಿದೆ.

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಸಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಈ ಬಗ್ಗೆ ಬಿಜೆಪಿ  ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

suddiyaana