ದೀಪಾವಳಿಗೆ ಬಿ.ಎಸ್‌ ಯಡಿಯೂರಪ್ಪಗೆ ಬಿಗ್ ಗಿಫ್ಟ್‌‌! – ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

ದೀಪಾವಳಿಗೆ ಬಿ.ಎಸ್‌ ಯಡಿಯೂರಪ್ಪಗೆ ಬಿಗ್ ಗಿಫ್ಟ್‌‌! – ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

ಬೆಂಗಳೂರು:  ದೀಪಾವಳಿಗೂ ಮುನ್ನವೇ ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್‌ ಬಿಗ್‌ ಗಿಫ್ಟ್‌ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ಆಯ್ಕೆಯಾಗಿದ್ದಾರೆ.

ಚುನಾವಣೆ ಫಲಿತಾಂಶ ಹೊರಬಿದ್ದ 6 ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೇಮಕಗೊಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿ ಆದೇಶ ಪ್ರಕಟಿಸಿದ್ದಾರೆ.‌

ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ – ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ನಳಿನ್‌ ಕುಮಾರ್ ಕಟೀಲ್‌ ಅವರನ್ನು ಕೆಳಗಡೆ ಇಳಿಸಬೇಕು ಎಂಬ ಆಗ್ರಹ ಪಕ್ಷದ ಒಳಗಡೆಯಿಂದಲೇ ಬಂದಿತ್ತು.  ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಸರು ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಲೋಕಸಭಾ ಚುನಾವಣೆ ದೃಷ್ಟಿಯಿಂದ  ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.

Shwetha M