‘ಚುನಾವಣೆ ಗೆಲ್ಲಲು ಬಿಜೆಪಿ ಹಣ, ಹೆಂಡದ ಹೊಳೆ ಹರಿಸುತ್ತಿದೆ’ – ಡಿಂಪಲ್ ಯಾದವ್
ಗಾಂಧಿನಗರ: ಚುನಾವಣೆ ಗೆಲ್ಲಲು ಬಿಜೆಪಿ ಹಣ, ಹೆಂಡದ ಹೊಳೆ ಹರಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಂಪಲ್ ಯಾದವ್, ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಹೋಟೆಲ್‌ನಲ್ಲಿ ಜಮಾಯಿಸಿದ್ದಾರೆ. ಮತದಾರರಿಗೆ ನಿರಂತರವಾಗಿ ಹಣ, ಹೆಂಡದ ಹೊಳೆ ಹರಿಸುತ್ತಿದ್ದಾರೆ ಈ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ಗುಜರಾತ್ ನಲ್ಲಿ 2ನೇ ಹಂತದ ಮತದಾನ – ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ಮೈನ್‌ಪುರಿ ಉಪಚುನಾವಣೆ ಅಗತ್ಯವಾಗಿದ್ದು, ಉತ್ತರಪ್ರದೇಶದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ, ರಾಮ್‌ಪುರ್ ಸದರ್ ಮತ್ತು ಖತೌಲಿ ವಿಧಾನಸಭಾ ಕ್ಷೇತ್ರಗಳು ಮತ್ತು ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.
होटल पाम, स्टेशन रोड, मैनपुरी में सैकड़ों की संख्या में भाजपा नेता, कार्यकर्ता इकट्ठे होकर निरंतर शराब और पैसा बंटवा रहे हैं।
मामले का संज्ञान ले चुनाव आयोग। @ceoup @ECISVEEP
— Dimple Yadav (@dimpleyadav) December 4, 2022