ಉಹಾಪೋಹ ಬೇಡ.. ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಉಹಾಪೋಹ ಬೇಡ.. ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಬಿಜೆಪಿ – ಜೆಡಿಎಸ್‌ ಮೈತ್ರಿ ವಿಚಾರ ಭಾರಿ ಸಂಚಲನ ಮೂಡಿಸಿದೆ. ಶುಕ್ರವಾರ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದರು. ಆದರೆ ಶನಿವಾರ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಬಿಎಸ್‌ವೈ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. ಮೈತ್ರಿ ಇನ್ನೂ ಅಂತಿಮಗೊಂಡಿಲ್ಲ. ಇನ್ನೂ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಇದನ್ನೂ ಓದಿ:ದೋಸ್ತಿ ಮಾಡಿಕೊಂಡರೂ ಹಾಲಿ ಸಂಸದರಿರುವ ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಹಿಂದೇಟು – ದಳ ಕಮಲ ಮೈತ್ರಿಗೆ ಮತ್ತಷ್ಟು ಸವಾಲು 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿಕೆ ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲಾರೆ. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ರಾಜ್ಯದಲ್ಲಿ ಬಿಜೆಪಿ ಬಲಗೊಳ್ಳಲಿದೆ ಎಂದು ಶುಕ್ರವಾರ ಹೇಳಿದ್ದಾರೆ. ಮಾಧ್ಯಮಗಳಲ್ಲಿ ವಿಷಯ ಗಮನಿಸುತ್ತಿದ್ದೇನೆ, ಯಡಿಯೂರಪ್ಪ ಅವರ ಹೇಳಿಕೆ ಗಮನಿಸಿದ್ದೇನೆ. ಅವರು ನಮ್ಮ ಬಗ್ಗೆ ಒಳ್ಳೆಯ ಮಾತನಾಡಿದ್ದಾರೆ. ನಾನು ಅವರಿಗೆ ಅಭಾರಿಯಾಗಿದ್ದೇನೆ. ಉಹಾಪೋಹ ಬೇಡ ಎಂದು ಎಚ್​​​ಡಿಕೆ ತಿಳಿಸಿದ್ದಾರೆ.

ಮೈತ್ರಿ ಕುರಿತು ಮಾತನಾಡಿದ ಯಡಿಯೂರಪ್ಪ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ. ಈ ಸಂಬಂಧ ನವದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದರು.

suddiyaana