ಕೊಲೆ ಕೇಸ್ ಸಂಬಂಧ ನ್ಯಾಯಾಧೀಶರ ಮುಂದೆ ಶರಣಾದ ವಿನಯ್ ಕುಲಕರ್ಣಿ – ಮತ್ತೆ ಸಿಬಿಐ ವಶಕ್ಕೆ ಪಡೆದ ಪೊಲೀಸರು

ಕೊಲೆ ಕೇಸ್ ಸಂಬಂಧ ನ್ಯಾಯಾಧೀಶರ ಮುಂದೆ ಶರಣಾದ ವಿನಯ್ ಕುಲಕರ್ಣಿ –  ಮತ್ತೆ ಸಿಬಿಐ ವಶಕ್ಕೆ ಪಡೆದ ಪೊಲೀಸರು

 

2016ರಲ್ಲಿ ನಡೆದ ಬಿಜೆಪಿ ನಾಯಕ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ  ಅಧ್ಯಕ್ಷ ವಿನಯ್ ಕುಲಕರ್ಣಿ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಶರಣಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾದ ಬೆನ್ನಲ್ಲೇ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರನ್ನು ಕೇಂದ್ರ ತನಿಖಾ ದಳದ (CBI) ವಶಕ್ಕೆ ನೀಡಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡದ ಬಗ್ಗೆ ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸುಪ್ರೀಂ ಕೋರ್ಟ್ ಅವರು ಧಾರವಾಡ ಜಿಲ್ಲೆಗೆ ಪ್ರವೇಶಿಸಬಾರದು ಎಂಬ ಷರತ್ತು ವಿಧಿಸಿತ್ತು. ಆದಾಗ್ಯೂ, ತಮ್ಮ ಕ್ಷೇತ್ರವನ್ನು ಪ್ರವೇಶಿಸದೆ, ವಿನಯ್ ಕುಲಕರ್ಣಿ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಉತ್ತಮ ಅಂತರದಿಂದ ಗೆದ್ದರು. ಅವರ ಪತ್ನಿ ಮತ್ತು ಮಗಳು ಅವರ ಪರವಾಗಿ ಪ್ರಚಾರ ಮಾಡಿದ್ದರು.

 

Kishor KV

Leave a Reply

Your email address will not be published. Required fields are marked *