ಕೋರ್ಟ್​ ಮಹತ್ವದ ಆದೇಶ – ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಕೋರ್ಟ್​ ಮಹತ್ವದ ಆದೇಶ – ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣ ಸಂಬಂಧ ಅರೆಸ್ಟ್‌ ಆಗಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ: ಬೌಲಿಂಗ್ ಸ್ಟಾರ್ಸ್.. ಮ್ಯಾಚ್ ವಿನ್ನರ್ಸ್ – ಬೂಮ್ ಬೂಮ್ ಬುಮ್ರಾನೇ ನಂಬರ್ 1

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಎಸ್​ಐಟಿ ಕಸ್ಟಡಿ ಶನಿವಾರಕ್ಕೆ ಅಂತ್ಯವಾಗಿದೆ.

ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಅಕ್ಟೋಬರ್ 19ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್​​ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

Shwetha M

Leave a Reply

Your email address will not be published. Required fields are marked *