ಕಮಲ ಪಾಳಯಕ್ಕೆ ಬಿಗ್‌ ಶಾಕ್‌ – ಬಿಜೆಪಿ ಎಂಎಲ್​ಸಿ ಸ್ಥಾನಕ್ಕೆ ಕೆಪಿ ನಂಜುಂಡಿ ರಾಜೀನಾಮೆ

ಕಮಲ ಪಾಳಯಕ್ಕೆ ಬಿಗ್‌ ಶಾಕ್‌ – ಬಿಜೆಪಿ ಎಂಎಲ್​ಸಿ ಸ್ಥಾನಕ್ಕೆ ಕೆಪಿ ನಂಜುಂಡಿ ರಾಜೀನಾಮೆ

ಲೋಕಸಭೆ ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ. ಇದೀಗ ರಾಜ್ಯ ಕಾಂಗ್ರೆಸ್‌ ಮತ್ತೊಬ್ಬ ಬಿಜೆಪಿ ನಾಯಕನಿಗೆ ಗಾಳ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ – ನಾನು ಹೆದರುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಗುಡುಗು

ಕೆಪಿ ನಂಜುಂಡಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಮ್ಮ ರಾಜೀನಾಮೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿ ನಂಜುಂಡಿ, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆರೋಪಿಸಿದರು.

ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಅವರು ಹೇಳಿದರು.

Shwetha M

Leave a Reply

Your email address will not be published. Required fields are marked *