ಬಳ್ಳಾರಿ ಬಿಜೆಪಿ ಸಂಸದರ ಮಗನಿಂದ ಯುವತಿ ಜೊತೆ ಪ್ರೇಮ, ಕಾಮದಾಟ – ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಕೇಸ್ ದಾಖಲು

ಬಳ್ಳಾರಿ ಬಿಜೆಪಿ ಸಂಸದರ ಮಗನಿಂದ ಯುವತಿ ಜೊತೆ ಪ್ರೇಮ, ಕಾಮದಾಟ – ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಕೇಸ್ ದಾಖಲು

ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್, ಬೆಂಗಳೂರು ಮೂಲದ ಯುವತಿ ಜೊತೆ ಪ್ರೇಮ, ಕಾಮದ ಹೆಸರಲ್ಲಿ ವಂಚಿಸಿರುವುದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಒಂದೇ ಮನೆಯ ನಾಲ್ವರನ್ನು ಕೊಂದ ಕಟುಕ ಅರೆಸ್ಟ್ – ಮಂಗಳೂರು ಏರ್‌ಪೋರ್ಟ್ ಉದ್ಯೋಗಿಯಿಂದ ಭೀಕರ ಕೃತ್ಯ

ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯೋರ್ವಳು ದೂರು ನೀಡಿದ್ದಾಳೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಯುವತಿಯೊಬ್ಬಳು ವಂಚನೆ ದೂರು ದಾಖಲಿಸಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದು, ಈ ದೂರಿ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಪ್ರೀತಿ ನಂತರ ಕಾಮ ಅಂತಾ ಲವ್ವಿಡವ್ವಿ ಶುರುಮಾಡಿದ್ದರು ಎಂಬ ಆರೋಪ ಬಂದಿದೆ. ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ ಬಳಿ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾರೆ ಎಂದು ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ.  ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದಾರೆ. ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಬೆಂಗಳೂರು ಮೂಲದ ಯುವತಿ ಹಾಗೂ ಶ್ರೀನಿವಾಸ್ ಎನ್ನುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Sulekha