ಸಂಸತ್ ಭವನ ಆವರಣದಲ್ಲಿ ದೊಡ್ಡ ಹೈಡ್ರಾಮಾ – ಬಿಜೆಪಿ ಸಂಸದನನ್ನು ತಳ್ಳಿದ್ರಾ ರಾಹುಲ್ ಗಾಂಧಿ?
ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಅಮಿತ್ ಶಾ ಹೇಳಿಕೆ ಖಂಡಿಸಿ ಗುರುವಾರ ಲೋಕಸಭೆಯಲ್ಲಿ ಗದ್ದಲ ಮುಂದುವರೆದಿದೆ. ಉಭಯ ಪಕ್ಷಗಳು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕುಸಿದುಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್ಕೌಂಟರ್ – ಐವರು ಉಗ್ರರ ಫಿನಿಷ್
ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆ ಮಾಡುವ ಸಂದರ್ಭದಲ್ಲಿ ಅಮಿತ್ ಶಾ ‘ಇತ್ತೀಚೆಗೆ ಅಂಬೇಡ್ಕರ್ ಜಪ ಫ್ಯಾಷನ್ ಆಗಿದ್ದು, ಇದರ ಬದಲು ದೇವರ ಜಪ ಮಾಡಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಹೇಳಿದ್ರು, ಈ ಹೇಳಿಕೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದರೆ, ಕೈ ನಾಯಕರ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದರು. ಈ ವೇಳೆ ಪ್ರತಾಪ್ ಸಾರಂಗಿ ಅವರನ್ನು ರಾಹುಲ್ ಗಾಂಧಿ ತಳ್ಳಿದ್ದು, ಸಾರಂಗಿ ಕುಸಿದು ಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರತಿಭಟನೆ ವೇಳೆ ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮಿತ್ ಶಾ ಅಂಬೇಡ್ಕರ್ ಕುರಿತು ಹೇಳಿರುವ ವೀಡಿಯೋಗಳನ್ನು ವಿಪಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಇನ್ನೂ ಅಮಿತ್ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಂಬೇಡ್ಕರ್ ಏನೇನು ಕೊಟ್ಟಿದೆ ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಹೇಳಿದ್ದರು. ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.