ಸಿ.ಟಿ ರವಿ ಆರೋಗ್ಯದಲ್ಲಿ ಏರುಪೇರು – ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಬಿಜೆಪಿ ಶಾಸಕ

ಸಿ.ಟಿ ರವಿ ಆರೋಗ್ಯದಲ್ಲಿ ಏರುಪೇರು – ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಬಿಜೆಪಿ ಶಾಸಕ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿದ್ದ ಸಿ.ಟಿ ರವಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದ್ದರು. ವಿಶ್ರಾಂತಿ ಪಡೆಯದೇ ಮತಶಿಕಾರಿ ನಡೆಸಿದ್ದರು. ಇದೀಗ ಸಿ.ಟಿ ರವಿ ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ.

ಇದನ್ನೂ ಓದಿ : ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ ಕುಮಾರಣ್ಣ – ಕಾರಣವೇನು ಗೊತ್ತಾ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಈ ಹಿಂದೆಯೂ ಕೂಡ ಸಿ.ಟಿ ರವಿ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಕಳೆದ ತಿಂಗಳು ಏಪ್ರಿಲ್​ 16ರಂದು ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕ್ಕಮಗಳೂರು ನಗರದ ಖಾಸಗಿ (ಆಶ್ರಯ) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಸಿ.ಟಿ.ರವಿ ಅವರಿಗೆ ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದರು. ಏಪ್ರಿಲ್​ 15ರ ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಸಿ.ಟಿ.ರವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬಿಜೆಪಿ ಕಚೇರಿಯಿಂದ ಆಶ್ರಯ ಆಸ್ಪತ್ರೆಗೆ ತೆರಳಿ ಅಡ್ಮಿಟ್ ಆಗಿದ್ದರು. ಕಿಡ್ನಿಯಲ್ಲಿ 12 ಎಂ.ಎಂ. ಕಲ್ಲು ಇದೆ ಅಂತ ವೈದ್ಯರು ತಿಳಿಸಿದ್ದರು.

suddiyaana