ಕಾಂಗ್ರೆಸ್ ಗ್ಯಾರಂಟಿಗೆ ಟಕ್ಕರ್‌ ಕೊಡಲು ಬಿಜೆಪಿಯ ಅಸ್ತ್ರ ಏನು? – ಲೋಕಸಮರ ಗೆಲ್ಲೋಕೆ ಕಮಲ ಪಡೆಯ ಪ್ಲಾನ್‌ ಏನು?

ಕಾಂಗ್ರೆಸ್ ಗ್ಯಾರಂಟಿಗೆ ಟಕ್ಕರ್‌ ಕೊಡಲು ಬಿಜೆಪಿಯ ಅಸ್ತ್ರ ಏನು? – ಲೋಕಸಮರ ಗೆಲ್ಲೋಕೆ ಕಮಲ ಪಡೆಯ ಪ್ಲಾನ್‌ ಏನು?

ಲೋಕಸಭಾ ಚುನಾವಣೆಗೆ ಕೆಲವೇ ಕೆಲವು ತಿಂಗಳುಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯಲ್ಲಿ ತೊಡಗಿವೆ. ಬಿಜೆಪಿ ಕೂಡ ಈ ಬಾರಿ ಚುನಾವಣೆಗೆ ಭರ್ಜರಿಯಾಗಿಯೇ ಸಿದ್ಧತೆ ಮಾಡಿಕೊಂಡಿದೆ. ಇದೀಗ ಬಿಜೆಪಿ 5 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಸರ್ವೇ ಕಾರ್ಯ ಆರಂಭಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಭೀಕರ ಅಗ್ನಿ ದುರಂತ – ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ 2 ಅಂತಸ್ತಿನ ಕಟ್ಟಡ

ಹೌದು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಸೂಕ್ತ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿಕೊಂಡಿದೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಗಳನ್ನು ನಿಲ್ಲಿಸಿದ್ರೆ ಉತ್ತಮ ಅನ್ನೋ ಲೆಕ್ಕಾಚಾರದಲ್ಲಿ ತೊಡಗಿದೆ. ಈ ಚುನಾವಣೆಯಲ್ಲಿ ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಕೊಡಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸಿದೆ. ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವರಿಷ್ಠರು ಸರ್ವೇ ನಡೆಸುತ್ತಿದ್ದಾರೆ. ಈ ಮೂಲಕ ಬೆಂಗಳೂರಿನ 2 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಾದರೂ ಮಹಿಳೆಯರಿಗೆ ಟಿಕೆಟ್ ನೀಡುವ ಪ್ಲಾನ್ ಅನ್ನು ಬಿಜೆಪಿ   ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಇತ್ತ ಉತ್ತರ ಕನ್ನಡ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿಯೂ ಸರ್ವೇ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾದಲ್ಲಿ ಹಾಲಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಡಬೇಕಾ ಎನ್ನುವ ಬಗ್ಗೆಯೂ ಸರ್ವೇ ನಡೆಯುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕಾಂಗ್ರೆಸ್ ಗ್ಯಾರಂಟಿ ಅಸ್ತ್ರಕ್ಕೆ ಮಹಿಳಾ ಗ್ಯಾರಂಟಿ ಅಸ್ತ್ರ ಪ್ರಯೋಗ ಮಾಡಲು ಬಿಜೆಪಿ ಯೋಜನೆ ರೂಪಿಸಿಕೊಂಡಿದೆ. ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಟಾರ್ ಮಹಿಳೆಯರೇ ಸ್ಪರ್ಧೆ ಮಾಡ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

Shwetha M