ಸಿಎಂ ಸಿದ್ದರಾಮಯ್ಯನವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌! – ಬಿಜೆಪಿ ಟೀಕೆ

ಸಿಎಂ ಸಿದ್ದರಾಮಯ್ಯನವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌! – ಬಿಜೆಪಿ ಟೀಕೆ

ಬೆಂಗಳೂರು: ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ( ಕೆಡಿಪಿ) ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣಾ ವಿಧಾನ ಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಆದೇಶವನ್ನು ಮುಚ್ಚಿಟ್ಟಿದ್ದಕ್ಕಾಗಿ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ಕಿಡಿಕಾರಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯನವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಯಿಂದ ಶೋಭಾ ಯಾತ್ರೆ – ಹರಿಯಾಣದ ನುಹ್‌ನಲ್ಲಿ ಮತ್ತೆ ಸೆಕ್ಷನ್ 144 ಜಾರಿ!

ಅದು ಗುಟ್ಟಾಗಿ! ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದು ಆರೋಪ ಮಾಡಿದೆ.

ಯತೀಂದ್ರ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧೆ ಮಾಡಿರಲಿಲ್ಲ. ಸಿಎಂ ಪುತ್ರ ಯತೀಂದ್ರ ವಿರುದ್ಧ ವರ್ಗಾವಣೆ ದಂಧೆ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿತ್ತು. ಸಿಎಂ ಕಚೇರಿಯಲ್ಲಿ ಹಸ್ತಕ್ಷೇಪದ ಆರೋಪವನ್ನು ಮಾಡಲಾಗಿತ್ತು. ಆದರೆ ಇದೆಲ್ಲವನ್ನು ಯತೀಂದ್ರ ನಿರಾಕರಣೆ ಮಾಡಿದ್ದರು. ಇದೀಗ ಕೆಡಿಪಿ ಹಾಗೂ ಆಶ್ರಯ ಸಮಿತಿಗೆ ನೇಮಕ ಮಾಡಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ಇನ್ನು ಇದೇ ಸಂದರ್ಭದಲ್ಲಿ ಬರ ನಿರ್ವಹಣೆ ಮಾಡಿದ ಸರ್ಕಾರದ ರೀತಿಯನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ, ರಾಜ್ಯದೆಲ್ಲೆಡೆ ಕಂಡು ಕೇಳರಿಯದಂತಹ ಬರ ಆವರಿಸಿದ್ದು, ನಾಡಿನ ಪ್ರಮುಖ ಜಲಾಶಯಗಳ ನೀರು ಸಂಪೂರ್ಣ ಬರಿದಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೂ ಸಹ ಹಾಹಾಕಾರ ಉಂಟಾಗಲಿದೆ ಎಂದಿದೆ.

ರಾಜ್ಯದೆಲ್ಲೆಡೆ ಬರ ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದ್ದ ಕಾಂಗ್ರೆಸ್‌ ಸರ್ಕಾರ, ಬರದ ಬಗ್ಗೆ ದನಿಯೆತ್ತದೇ, ತಮಿಳುನಾಡಿಗೆ ನೀರು ಹರಿಸುವುದನ್ನೇ ಆದ್ಯತೆ ಎಂದುಕೊಂಡಿರುವುದು ದುರಂತ ಎಂದು ಟ್ವೀಟ್‌ ಮೂಲಕ ಆರೋಪ ಮಾಡಿದೆ.

suddiyaana