ರ್ಯಾಲಿ ವೇಳೆ ಮೋದಿ ಮೋದಿ ಘೋಷಣೆ – ಶೇಕ್ ಹ್ಯಾಂಡ್ ಮಾಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಂದಲ್ಲ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲೇ ಇರುತ್ತಾರೆ. ರಾಹುಲ್ ಗಾಂಧಿಗೆ ಹೋದಲ್ಲಿ, ಬಂದಲ್ಲಿ ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡುವುದು, ಮೋದಿ ಮೋದಿ ಅಂತಾ ಘೋಷಣೆಗಳನ್ನು ಕೂಗುವುದನ್ನು ನೋಡಿಯೇ ಇರುತ್ತೇವೆ. ಇದೀಗ ಇಂತಹದ್ದೇ ಮತ್ತೊಂದು ಪ್ರಸಂಗ ನಡೆದಿದೆ. ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿದ್ದ ವೇಳೆ ಬಿಜೆಪಿ ನಾಯಕರು ಮೋದಿ ಮೋದಿ ಅಂತಾ ಕೂಗಿದ್ದಾರೆ. ಈ ವೇಳೆ ಬಿಜೆಪಿ ನಾಯಕರಿಗೆ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ನೀಡಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಯಶ್, ದರ್ಶನ್ ಇಬ್ರೂ ಪ್ರಚಾರಕ್ಕೆ ಬರಲ್ವಾ..? ಸುಮಲತಾಗೆ ಯಾರ ಬೆಂಬಲವೂ ಸಿಗ್ತಿಲ್ವಾ..?
ರಾಹುಲ್ ಗಾಂಧಿ ಒಡಿಶಾ ಪ್ರವಾಸದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ವೈರಲ್ ಆದ ವಿಡಿಯೋದಲ್ಲಿ, ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ರ್ಯಾಲಿ ನಡೆಸುತ್ತಿದ್ದರು. ಈ ವೇಳೆ ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಕೂಡಲೇ ವಾಹನವನ್ನು ನಿಲ್ಲಿಸುವಂತೆ ಹೇಳಿದ ರಾಹುಲ್ ಗಾಂಧಿ, ವಾಹನದಿಂದ ಇಳಿದು ನೇರವಾಗಿ ಬಿಜೆಪಿ ಕಾರ್ಯಕರ್ತರಿದ್ದಲ್ಲಿಗೆ ಹೋಗಿದ್ದಾರೆ. ಈ ವೇಳೆ ಕಾರ್ಯಕರ್ತರು ಜೈ ಶ್ರೀರಾಮ್, ಜೈ ಶ್ರೀರಾಮ್, ಮೋದಿ-ಮೋದಿ ಎಂದು ಘೋಷಣೆಗಳನ್ನು ಕೂಗಿದರು. ಈ ನಡುವೆಯೂ ರಾಹುಲ್ ಗಾಂಧಿ ಅವರು ಬಿಜೆಪಿ ಕಾರ್ಯಕರ್ತರಿಗೆ ಶೇಕ್ ಹ್ಯಾಂಡ್ ಮಾಡಲು ಮುಂದಾಗಿದ್ದಾರೆ. ಆಗ ಕೆಲವು ಕಾರ್ಯಕರ್ತರು ರಾಹುಲ್ ಗಾಂಧಿಗೆ ಆಲೂಗಡ್ಡೆಯನ್ನು ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿಗೆ ಆಲೂಗಡ್ಡೆ ನೀಡಿದ್ಯಾಕೆ?
ರಾಹುಲ್ ಗಾಂಧಿ ಅವರು 2017 ರಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಗುಜರಾತ್ ಭಾಷಣ ಮಾಡಿದ ರಾಹುಲ್ ಗಾಂಧಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋದಲ್ಲಿ, “ಮೆಷೀನ್ನ ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ ಆಕಡೆಯಿಂದ ಚಿನ್ನ ಬರುತ್ತದೆ” ಎಂದು ಹೇಳಿದ್ದರು. ಈ ವಿಡಿಯೋ ವೈರಲ್ ನಂತರ ಬಿಜೆಪಿ ನಾಯಕರು, ಕಾರ್ಯಕರ್ತರು ರಾಹುಲ್ ಗಾಂಧಿ ಅವರನ್ನು ವ್ಯಂಗ್ಯವಾಡಲು ಆರಂಭಿಸಿದ್ದರು. ಅದಾಗ್ಯೂ, ಆಲೂಗಡ್ಡೆ ಹೇಳಿಕೆಯ ವಿಡಿಯೋ ಅರ್ಧ ಮಾತ್ರ ವೈರಲ್ ಆಗಿದೆ ಎನ್ನಲಾಗುತ್ತಿದೆ. ಆಲೂಗಡ್ಡೆಯಿಂದ ಚಿನ್ನ ತಯಾರಿಸುವ ಮೆಷೀನ್ ಬಗ್ಗೆ ಮೋದಿ ರೈತರಿಗೆ ಹೇಳಿದ ಮಾತನ್ನು ರಾಹುಲ್ ಹೇಳಿದ್ದಾರಷ್ಟೆ ಎಂಬ ವಾದವೂ ಇದೆ.