‘ಬಡವರ ಮಕ್ಕಳನ್ನು ಗುಲಾಮಗಿರಿಗೆ ತಳ್ಳುವುದೇ ಬಿಜೆಪಿ ಅಜೆಂಡಾ’ – ಕಾಂಗ್ರೆಸ್  

‘ಬಡವರ ಮಕ್ಕಳನ್ನು ಗುಲಾಮಗಿರಿಗೆ ತಳ್ಳುವುದೇ ಬಿಜೆಪಿ ಅಜೆಂಡಾ’ – ಕಾಂಗ್ರೆಸ್  

ಬೆಂಗಳೂರು: ಎಸ್‍ಸಿ, ಎಸ್‍ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್‍ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್ ಅಸಮಧಾನ ಹೊರಹಾಕಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ‘ಭಾರತದಲ್ಲಿ ಶೈಕ್ಷಣಿಕ ಅಸಮಾನತೆ ಹೆಚ್ಚುತ್ತಿದೆ. ಪ್ರಾಥಮಿಕ ಶಿಕ್ಷಣದ ಹಂತದಲ್ಲೇ ಶಾಲೆ ತೊರೆಯುವ ಸಂಖ್ಯೆ ಹೆಚ್ಚಿದೆ. ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಿದೆ ಇದರ ನಡುವೆ ಶಿಕ್ಷಣಕ್ಕೆ ಉತ್ತೇಜಿಸಬೇಕಾದ ಸರ್ಕಾರ ವಿದ್ಯಾರ್ಥಿವೇತನ ನಿಲ್ಲಿಸಿದೆ. ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಗುಲಾಮಗಿರಿಗೆ ತಳ್ಳುವ ಸ್ಪಷ್ಟ ಅಜೆಂಡಾ ಬಿಜೆಪಿಯದ್ದು’ ಎಂದು ಕಿಡಿಕಾರಿದೆ.

ಇದನ್ನೂ ಓದಿ: ‘ಕರ್ನಾಟಕದ ಮೇಲೆ ಮಹಾರಾಷ್ಟ್ರಕ್ಕಿಂತ ರಾಜ್ಯ ಸರ್ಕಾರಕ್ಕೇ ಹಗೆ ಹೆಚ್ಚಿದೆ’ – ಕಾಂಗ್ರೆಸ್

ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 1 ರಿಂದ 8ನೇ ತರಗತಿ ಮಕ್ಕಳಿಗೆ ಅದರಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಶಿಕ್ಷಣ ಮಂಡಳಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಹೊರತಾಗಿ ಬೇರೆ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ ನೀಡಲಾಗುವುದಿಲ್ಲ ಎಂದು ಹೇಳಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

suddiyaana