ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮೊದಲ ಹೋರಾಟ ಶುರು! – ಇಂದು ಮತ್ತು ನಾಳೆ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮೊದಲ ಹೋರಾಟ ಶುರು! – ಇಂದು ಮತ್ತು ನಾಳೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮೊದಲ ಹೋರಾಟ ಆರಂಭಿಸಿದೆ. ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ನಿರ್ಧಾರಗಳನ್ನು ಹಿಂಪಡೆಯಬೇಕೆಂದು ಎಂದು ಆಗ್ರಹಿಸಿ ಬಿಜೆಪಿ ಸೋಮವಾರ ಹಾಗೂ ಮಂಗಳವಾರ ಪ್ರತಿಭಟನೆ ನಡೆಸುತ್ತಿದೆ.

ಈ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ‘200 ಯೂನಿಟ್‌ವರೆಗೆ ವಿದ್ಯುತ್ ಉಚಿತ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ 80 ಯೂನಿಟ್‌ವರೆಗೆ ಎಂದು ಆದೇಶ ಹೊರಡಿಸಿ ಜನ ವಿರೋಧಿ ನೀತಿ ಪ್ರದರ್ಶಿಸಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಡಿಶಾ ರೈಲ್ವೆ ದುರಂತ: 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ – ಭಾವು​ಕ​ರಾಗಿ ದೇವರಿಗೆ ಕೈಮುಗಿದ ಸಚಿವ ವೈಷ್ಣವ್‌

“ಅಲ್ಲದೇ, ವಿದ್ಯುತ್ ಶುಲ್ಕವನ್ನು ಏರಿಸಿದ್ದೀರಿ. ಒಂದು ಯೂನಿಟ್‌ಗೆ 70 ಪೈಸೆ ಹೆಚ್ಚಿಸಲಾಗಿದೆ. ಅಂದರೆ 80 ಯೂನಿಟ್‌ಗೆ 756 ಹೆಚ್ಚಿಸಿದಂತಾಗುತ್ತದೆ. ಶುಲ್ಕ ಹೆಚ್ಚಿಸಿ ಜನರಿಂದಲೇ ಮತ್ತೆ ವಸೂಲಿ ಮಾಡಲಾಗುತ್ತಿದೆ. 70 ಪೈಸೆ ಹೆಚ್ಚಳವನ್ನು ಹಿಂದಕ್ಕೆ ಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮನೆಗಳಲ್ಲಿ ಪ್ರತಿ ತಿಂಗಳು 70 ಯೂನಿಟ್ ವಿದ್ಯುತ್‌ ಬಳಸುತ್ತಿದ್ದರೆ 10 ಯೂನಿಟ್ ಹೆಚ್ಚುವರಿ ಬಳಸಿ ಎಂದು ಹೇಳಿದ್ದಾರೆ. ಅಂದರೆ 80 ಯೂನಿಟ್ ಬಳಸಬಹುದು. ಆದರೆ 80 ಯೂನಿಟ್‌ಗಿಂತ ಹೆಚ್ಚು ಬಳಸುವಂತಿಲ್ಲ ಎಂದು ಷರತ್ತು ಹಾಕಿದ್ದಾರೆ. ಹಾಗಿದ್ದರೆ 200 ಯೂನಿಟ್‌ವರೆಗೆ ಬಳಸಿದರೆ ಉಚಿತ ಎಂಬ ಮಾತು ಹೇಳಿದ್ದೇಕೆ? ಇದು ವಚನ ಭ್ರಷ್ಟತೆ ಅಲ್ಲವೆ’ ಎಂದು ಪ್ರಶ್ನಿಸಿದರು.

‘ಬಿಜೆಪಿ ಸರ್ಕಾರ ಇದ್ದಾಗ ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್‌ಗೆ 15 ನೀಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದರಲ್ಲಿ 11.5 ಕಡಿಮೆ ಮಾಡಿದೆ. ಇದರಿಂದ ಬಡ ರೈತರಿಗೆ ಸಹಾಯ ಮಾಡಿದಂತಾಯಿತೆ’ ಎಂದು ಅವರು ಪ್ರಶ್ನಿಸಿದ್ದಾರೆ.

suddiyaana