ಟಿಕೆಟ್ ತಪ್ಪಿಸಿದ್ದು ಬಿ.ಎಲ್ ಸಂತೋಷ್ – ಮನಸಿನ ವೇದನೆಯನ್ನು ಬಿಚ್ಚಿಟ್ಟ ಜಗದೀಶ್ ಶೆಟ್ಟರ್..!

ಟಿಕೆಟ್ ತಪ್ಪಿಸಿದ್ದು ಬಿ.ಎಲ್ ಸಂತೋಷ್ – ಮನಸಿನ ವೇದನೆಯನ್ನು ಬಿಚ್ಚಿಟ್ಟ ಜಗದೀಶ್ ಶೆಟ್ಟರ್..!

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತನಗಾದ ವೇದನೆಯನ್ನು ಹೇಳಿಕೊಂಡಿದ್ದಾರೆ. ಜೊತೆಗೆ ತನಗೆ ಟಿಕೆಟ್ ತಪ್ಪಿಸಿದ್ದು ಯಾರು ಅನ್ನೋದರ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಬಿಎಲ್ ಸಂತೋಷ್ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ತಮಗೆ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕಾರಣ ಎಂದು ನೇರವಾಗಿ ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಗಳಗಳನೇ ಕಣ್ಣೀರಿಟ್ಟ ಶಿಲ್ಪಾ ಶೆಟ್ಟರ್..! – ಪತ್ನಿಯನ್ನು ಎದೆಗೊರಗಿಸಿಕೊಂಡು ಭಾವುಕರಾದ ಜಗದೀಶ್ ಶೆಟ್ಟರ್..!

ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಕೋರ್ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರು ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದ್ರೆ, ಕೊನೆಗೆ ಟಿಕೆಟ್ ಕೈತಪ್ಪುವುದಕ್ಕೆ ಸಂತೋಷ್ ಕಾರಣ ಎಂದು ನೇರವಾಗಿಯೇ ಆರೋಪ ಮಾಡಿದ್ದಾರೆ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಆಗಿದ್ದರು. ಅಲ್ಲಿ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ ಎಂದು ಸಂತೋಷ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಟಿಕೆಟ್ ಘೋಷಣೆಯಾಗುವವರೆಗೆ ಸುಮ್ಮನಿದ್ದೆ. ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲಾ ಹೇಳುತ್ತಿದ್ದಾರೆ. ಇದನ್ನು ಒಳ್ಳೆಯ ರೀತಿಯಲ್ಲಿಯೇ ಹೇಳಬಹುದಿತ್ತು ಎಂದು ಜಗದೀಶ್ ಶೆಟ್ಟರ್ ನೋವಿನಿಂದ ಮಾತನಾಡಿದ್ದಾರೆ.

suddiyaana