ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ – 11 ಮಂದಿ ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ – 11 ಮಂದಿ ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಅಕ್ರಮ ಪಟಾಕಿ ಕರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಸ್ಪೋಟ ಸಂಭವಿಸಿದ್ದು, ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬ್ರಿಟನ್‌ ರಾಜ 3 ನೇ ಚಾಲ್ಸ್‌ಗೆ ಕ್ಯಾನ್ಸರ್‌ – ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಕಾರ್ಖಾನೆಯಲ್ಲಿ ನಿರಂತರ ಸ್ಪೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ ಸುಮಾರು 60ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ.  ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಸುಮಾರು 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ನಿರಂತರ ಸ್ಫೋಟಗಳು ಸಂಭವಿಸಿದ ಕಾರಣ 100ಕ್ಕೂ ಹೆಚ್ಚು ಮನೆಗಳಲ್ಲಿದ್ದ ಜನರನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಘಟನೆಯಲ್ಲಿ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಂದಿಸಲು ಇಂದೋರ್ ಮತ್ತು ಭೋಪಾಲ್‍ನಿಂದ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಇಂದೋರ್‌ನ ವೈದ್ಯಕೀಯ ಕಾಲೇಜು ಹಾಗೂ ಏಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Shwetha M