ಸಿಲಿಕಾನ್ ಸಿಟಿ ಮಂದಿಗೆ ಗುಡ್ನ್ಯೂಸ್! – ಇನ್ಮುಂದೆ BMTC ಬಸ್, ನಮ್ಮ ಮೆಟ್ರೋಗೆ ಸ್ಮಾರ್ಟ್ ಕಾರ್ಡ್!

ಸಿಲಿಕಾನ್ ಸಿಟಿ ಮಂದಿಗೆ ಮಹತ್ವದ ಸುದ್ದಿಯಿದೆ. ಇನ್ಮುಂದೆ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಇನ್ನು ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುವಾಗ ಈ ಒಂದು ಕಾರ್ಡ್ ಇದೆ ಸಾಕು. ಬೆಂಗಳೂರಿನಲ್ಲಿ ಎಲ್ಲಿ ಬೇಕಾದ್ರೂ ಓಡಾಡಬಹುದು!
ಇದನ್ನೂ ಓದಿ: ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲೂ ಸೀಸದ ಅಂಶ ಪತ್ತೆ! – ಸರ್ಕಾರದಿಂದಲೇ ಟೆಸ್ಟ್ಗೆ ಆದೇಶ
ಬಿಎಂಟಿಸಿ ಬಸ್ ಮತ್ತು ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇನ್ಮುಂದೆ ಬೇರೆ ಬೇರೆ ಕಾರ್ಡ್ಳನ್ನು ಇಟ್ಟುಕೊಳ್ಳುವ ಅಥವಾ ಚಿಲ್ಲರೆ ಹಣಕ್ಕಾಗಿ ಹುಡುಕಾಡುವ ಕಿರಿಕಿರಿ ಇರಲ್ಲ. ಜೂನ್ ತಿಂಗಳಿನಿಂದ ಬಿಎಂಟಿಸಿ ಹಾಗೂ ಮೆಟ್ರೋ ಎರಡಕ್ಕೂ ಬಳಸಬಹುದಾದ ಒಂದೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಅಧಿಕೃತವಾಗಿ ಜಾರಿಗೆ ಬರಲಿದೆ.ಈಗಾಗಲೇ ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಚಾಲ್ತಿಯಲ್ಲಿದೆ. ಇದೇ ಮಾದರಿಯನ್ನು ಈಗ ಬಿಎಂಟಿಸಿ ಬಸ್ಗಳಿಗೂ ವಿಸ್ತರಿಸಲಾಗುತ್ತಿದೆ. ಪ್ರಯಾಣಿಕರು ಒಂದೇ ಕಾರ್ಡ್ ರೀಚಾರ್ಜ್ ಮಾಡಿಕೊಂಡು ಅದನ್ನೇ ಮೆಟ್ರೋ ನಿಲ್ದಾಣಗಳಲ್ಲಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಸ್ಟೈಪ್ ಮಾಡಿ ಪ್ರಯಾಣಿಸಬಹುದು.
ಈ ಯೋಜನೆಯನ್ನು ಜಾರಿಗೊಳಿಸಲು ಬಿಎಂಟಿಸಿ ಸನ್ನದ್ಧವಾಗಿದ್ದು, ಶೀಘ್ರದಲ್ಲೇ ಎಲ್ಲಾ ಡಿಪೋಗಳಿಗೆ ಅತ್ಯಾಧುನಿಕ ಟಿಕೆಟ್ ಮಿಷನ್ಗಳನ್ನು ವಿತರಿಸಲಾಗುವುದು. ಈ ಮಿಷನ್ಗಳ ಮೂಲಕ ಸ್ಮಾರ್ಟ್ ಕಾರ್ಡ್ಗಳನ್ನು ಸುಲಭವಾಗಿ ರೀಡ್ ಮಾಡಬಹುದಾಗಿದೆ. ಈ ಕುರಿತು ಕಂಡಕ್ಟರ್ಗಳಿಗೆ ಅಗತ್ಯ ತರಬೇತಿಯನ್ನು ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ಗಳಲ್ಲಿ ಕ್ಯೂಆರ್ ಕೋಡ್ ಬಳಸಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಅಕ್ರಮ ಕ್ಯೂಆರ್ ಕೋಡ್ಗಳ ಮೂಲಕ ಭ್ರಷ್ಟಾಚಾರ ನಡೆಯುತ್ತಿತ್ತು. ಈಗ ಹೊಸ ಇಟಿಎಂ ಮಿಷನ್ಗಳು ಮತ್ತು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರುವುದರಿಂದ ಇಂತಹ ವಂಚನೆಗಳಿಗೆ ಬ್ರೇಕ್ ಬೀಳಲಿದೆ. ಪಾರದರ್ಶಕ ವಹಿವಾಟಿಗೆ ಈ ವ್ಯವಸ್ಥೆ ಹೆಚ್ಚು ಸಹಕಾರಿಯಾಗಲಿದೆ.
ಸದ್ಯ ತಾಂತ್ರಿಕ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ಜೂನ್ ತಿಂಗಳ ವೇಳೆಗೆ ಸಾರ್ವಜನಿಕರಿಗೆ ಈ ಸಂಯೋಜಿತ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲು ಬಿಎಂಟಿಸಿ ಮತ್ತು ಬಿಎಂಆರ್ಸಿಎಲ್ ಉದ್ದೇಶಿಸಿವೆ. ಇದು ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರ ಸಮಯ ಉಳಿಸುವುದಲ್ಲದೆ, ಸುಲಭ ಸಂಚಾರಕ್ಕೆ ಹಾದಿ ಮಾಡಿಕೊಡಲಿದೆ.

ನೋಡಿರಿ

