ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್‌ನ್ಯೂಸ್! – ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ!
ಪಿಯುಸಿ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಗುಡ್ ನ್ಯೂಸ್ವೊಂದನ್ನು ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ದಿನದಂದು ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ ಎಂದು ವರದಿಯಾಗಿದೆ.
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮಾರ್ಚ್ 1ರಿಂದ 23ರವರೆಗೆ ಪಿಯು ಪರೀಕ್ಷೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯ ಉಚಿತ ಸೇವೆಯನ್ನು ಬಿಎಂಟಿಸಿ ನೀಡುತ್ತಿದೆ. ಪರೀಕ್ಷೆಯ ದಿನ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೊಠಡಿಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರ ಜೊತೆಗೆ ಪರೀಕ್ಷಾ ಕೇಂದ್ರಗಳ ರೂಟ್ನಲ್ಲಿ ಹೆಚ್ಚುವರಿ ಬಸ್ ಬಿಡಲು ಚಿಂತನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆ ಬಸ್ಗಳನ್ನು ಸ್ಟಾಪ್ ಮಾಡಲು ಸೂಚನೆ ನೀಡಲಾಗಿದೆ.
ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1,124 ಪರೀಕ್ಷಾ ಕೇಂದ್ರಗಳು ಇರಲಿದೆ. ಎಸ್ಎಸ್ಎಲ್ಸಿಗೆ 2,747 ಪರೀಕ್ಷಾ ಕೇಂದ್ರಗಳು ಇರಲಿದೆ.