ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ! – ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಸ್‌

ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ! – ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಸ್‌

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಸಿಬ್ಬಂದಿಗಳಿಗೆ ಬಿಂದಿ, ತಿಲಕ ನಿಷೇಧ ಮಾಡಿಲ್ಲ! – ಸೋಶಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದ ಇಂಡಿಗೋ ಸಂಸ್ಥೆ

ಈ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ.

ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಈ ವೇಳೆ ಪಕ್ಕದಲ್ಲಿ ಬಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ನಿಯಂತ್ರಣ ತಪ್ಪಿ ಬಸ್ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ವಿದ್ಯಾರ್ಥಿನಿ ತಲೆ ಮೇಲೆ ಬಸ್‌ನ ಚಕ್ರ ಹರಿದಿದೆ. ಇದ್ರಿಂದಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.  ಮೃತದೇಹವನ್ನು ಆರ್‌ಆರ್ ನಗರ ಮೆಡಿಕಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌‌. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Shwetha M