ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಬಿಎಂಟಿಸಿ ಬಸ್ ಸೇವೆ ಆರಂಭ
ಬೆಂಗಳೂರು: ಸುಗಮ ಪ್ರಯಾಣಕ್ಕಾಗಿ ಮತ್ತು ಪ್ರಯಾಣಿಕರಿಗೆ ನೆರವಾಗುವ ಉದ್ದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2ರಲ್ಲಿ ಬಿಎಂಟಿಸಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಇದನ್ನೂ ಓದಿ: ಫ್ರೀ ಬಸ್ ಎಫೆಕ್ಟ್ -ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಜೊತೆ ಪುರುಷ ಪ್ರಯಾಣಿಕರ ಸಂಖ್ಯೆಯೂ ಡಬಲ್!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಹಾಗೂ ವಿಮಾನ ನಿಲ್ದಾಣದಿಂದ ನಗರದ ವಿವಿಧ ಭಾಗಗಳಿಗೆ ತೆರಳಲು ಕಳೆದ 2 ತಿಂಗಳಿನಿಂದ ಟರ್ಮಿನಲ್ 2 ವರೆಗೆ ಪ್ರಾಯೋಗಿಕ ಆಧಾರದ ಮೇಲೆ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಬೇಡಿಕೆಯ ಹೆಚ್ಚಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟರ್ಮಿನಲ್-2ರಲ್ಲಿಯೂ ಇದೀಗ ಬಿಎಂಟಿಸಿ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ.
ಈ ಬಗ್ಗೆ ಬಿಎಂಟಿಸಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಟರ್ಮಿನಲ್ 2ನಲ್ಲಿ ಬಿಎಂಪಿಸಿ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆಗಳನ್ನು ಒದಗಿಸಲಿದೆ. ಬಸ್ ದರ ಇತರೆ ಯಾವುದೇ ಟರ್ಮಿನಲ್ ಗಳಲ್ಲಿರುವ ದರದಂತೆಯೇ ಇರಲಿದೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.
ಪ್ರತೀ ದಿನ ಸರಾಸರಿ 6,000-7,000 ಪ್ರಯಾಣಿಕರು ವಿಮಾನ ನಿಲ್ದಾಣದಿಂದ ನಗರದ ಕಡೆಗೆ ಪ್ರಯಾಣಿಸುತ್ತಾರೆ. ಅದೇ ರೀತಿ 5,000-6,000 ಜನರು ವಿರುದ್ಧ ದಿಕ್ಕಿನಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಾರೆ. ನಾವು ಸದ್ಯಕ್ಕೆ ಟರ್ಮಿನಲ್ 2 ನಲ್ಲಿ ಎರಡು ವಿಭಿನ್ನ ವಿಧಾನಗಳ ಮೂಲಕ ಪ್ರಯಾಣಿಕರನ್ನು ಹೊತ್ತೊಯ್ಯಲಾಗುತ್ತಿದೆ. ಪ್ರಯಾಣಿಕರ ಹೊತ್ತೊಯ್ಯಲು ಪ್ರತ್ಯೇಕ ಶುಲ್ಕಗಳನ್ನು ಸಂಗ್ರಹಿಸುತ್ತಿಲ್ಲ. ಟರ್ಮಿನಲ್ 2 ನಲ್ಲಿ ಬಸ್‌ಗಳ ನಿಲುಗಡೆಗೆ ಸ್ವಲ್ಪ ಜಾಗವನ್ನು ಮೀಸಲಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“Hello Commuters ”
Yes, you heard it Right… ! Now we are operating the buses from Terminal 2 also.For safe,comfortable and affordable journey opt BMTC services..
Bringing our service at your door steps. pic.twitter.com/1X7fDndKlr
— BMTC (@BMTC_BENGALURU) July 1, 2023