ಬಾಲಿವುಡ್‌ನ ಹಾಟ್ ನಟಿ ಪೂನಂ ಪಾಂಡೆ ಇನ್ನು ನೆನಪು ಮಾತ್ರ – ಕ್ಯಾನ್ಸರ್ಗೆ ಬಲಿಯಾದ ನಟಿಗೆ ಅಭಿಮಾನಿಗಳ ಅಂತಿಮ ನಮನ

ಬಾಲಿವುಡ್‌ನ ಹಾಟ್ ನಟಿ ಪೂನಂ ಪಾಂಡೆ ಇನ್ನು ನೆನಪು ಮಾತ್ರ – ಕ್ಯಾನ್ಸರ್ಗೆ ಬಲಿಯಾದ ನಟಿಗೆ ಅಭಿಮಾನಿಗಳ ಅಂತಿಮ ನಮನ

ನಟಿ ಪೂನಂ ಪಾಂಡೆ ಅಭಿಮಾನಿಗಳಿಗೆ ಇದು ಅರಗಿಸಿಕೊಳ್ಳಲಾಗದ ಶಾಕಿಂಗ್ ನ್ಯೂಸ್. ಹಾಟ್ ನಟಿ ಪೂನಂ ಪಾಂಡೆ ಇನ್ನಿಲ್ಲ ಎಂಬ ವಿಚಾರ ಕೇಳಿ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರೀತಿಯ ನಟಿಯ ಫೋಟೋ, ವಿಡಿಯೋ ಹಾಕಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಬಿಗ್‌ಬಾಸ್‌ ಮನೆಯಿಂದ ಹೊರಬರುತ್ತಿದ್ದಂತೆ ಡ್ರೋನ್‌ ಗೆ ಶಾಕ್‌ ಮೇಲೆ ಶಾಕ್!‌ – ಪ್ರತಾಪ್‌ ವಿರುದ್ಧ ಮತ್ತೊಂದು ಕೇಸ್‌!

ಬಾಲಿವುಡ್‌ನ ನಟಿ ಪೂನಂ ಪಾಂಡೆ ಇನ್ನು ನೆನಪು ಮಾತ್ರ. ನಟಿ ಪೂನಂ ಪಾಂಡೆ ಅವರು 32 ನೇ ವಯಸ್ಸಿನಲ್ಲಿ ಗರ್ಭಕಂಠದ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ಪೂನಂ ಪಾಂಡೆ ಮ್ಯಾನೇಜರ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಈ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನಗಿತ್ತು. ಗರ್ಭಕಂಠದ ಕ್ಯಾನ್ಸರ್‌ ಕಾರಣದಿಂದಾಗಿ ನಾವು ಪೂನಮ್ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಈ ದುಃಖದ ಸಮಯದಲ್ಲಿ ನಾವು ನಮ್ಮ ಖಾಸಗಿತನಕ್ಕಾಗಿ ವಿನಂತಿ ಮಾಡುತ್ತಿದ್ದೇವೆ. ಆಕೆಯೊಂದಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ಪೋಸ್ಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಪೂನಂ ಕೊನೆಯುಸಿರು ಎಳೆದಿದ್ದಾರೆ. ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಅವರು ಮಾಡಿಕೊಂಡ ವಿವಾದಗಳು ಹಲವು. ಫೆಬ್ರವರಿ 2ರಂದು ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ನಶಾ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು.  ಆ ಬಳಿಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿಲ್ಲ. 2022ರಲ್ಲಿ ಪ್ರಸಾರ ಕಂಡ ಲಾಕ್​ಅಪ್ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು.

 

Sulekha