ವಾಣಿಜ್ಯ ನಗರಿಯ 6 ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟದ ಬೆದರಿಕೆ – ಮುಂಬೈ ಪೊಲೀಸರ ತೀವ್ರ ಕಟ್ಟೆಚ್ಚರ

ವಾಣಿಜ್ಯ ನಗರಿ ಮುಂಬೈನಲ್ಲಿ ಬಾಂಬ್ ಸ್ಪೋಟಿಸುವುದಾಗಿ ಅಪರಿಚಿತರು ಬೆದರಿಕೆ ಹಾಕಿದ್ದಾರೆ. ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಸಾಕಾನೆ ಕ್ಯಾಂಪ್ ಮೇಲೆ ಬೀಟಮ್ಮ ಗ್ಯಾಂಗ್‌ನಿಂದ ರಾತ್ರೋರಾತ್ರಿ ದಾಳಿ! – ಅಭಿಮನ್ಯು ನೇತೃತ್ವದ ತಂಡ ಶಿಫ್ಟ್!
ಶುಕ್ರವಾರ ಮುಂಜಾನೆ ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.ಬೆದರಿಕೆ ಕರೆ ಬರುತ್ತಿದ್ದಂತೆ ಪೊಲೀಸರು ನಗರದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದವರ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ.
ಮುಂಬೈ ಪೊಲೀಸರ ಅಪರಾಧ ವಿಭಾಗ ಮತ್ತು ಮಹಾರಾಷ್ಟ್ರ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಬೆದರಿಕೆ ಸಂದೇಶದ ಬಗ್ಗೆ ಎಚ್ಚರಿಕೆ ನೀಡಿದ್ದು, ಕಳುಹಿಸಿದವರ ಪತ್ತೆಗೆ ತನಿಖೆ ನಡೆಯುತ್ತಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿದ್ದವು.