ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್‌ಗೆ ರಾಜ್ಯಸರ್ಕಾರದಿಂದ ಬ್ರೇಕ್
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್‌ಗೆ ರಾಜ್ಯಸರ್ಕಾರ ಬ್ರೇಕ್ ಹಾಕಿದೆ. ಜೊತೆಗೆ ಸರ್ಕಾರದ ವಿರುದ್ಧ ಘೋಷಣೆ ಮಾಡಿದ್ದ ಎಂಇಎಸ್ ಪುಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ನಗರದ ಟಿಳಕವಾಡಿ ವ್ಯಾಕ್ಸಿನ್ ಡಿಪೋದಲ್ಲಿ ಪೆಂಡಾಲ್ ಹಾಕಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ ಪೊಲೀಸ್ ಇಲಾಖೆ ಮಹಾಮೇಳಾವ್ ನಡೆಸಲು ಅನುಮತಿ ನೀಡಲಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಎಂಇಎಸ್ ಕರ್ನಾಟಕದ ವಿರುದ್ಧ ಘೋಷಣೆ ಕೂಗಲು ಶುರುಮಾಡಿದ್ದರು. ಇದಕ್ಕೂ ಕೂಡಾ ಬ್ರೇಕ್ ಹಾಕಿದ ಪೊಲೀಸರು ಮೂವತ್ತಕ್ಕೂ ಹೆಚ್ಚು ಪುಂಡರನ್ನು ವಶಕ್ಕೆ ತೆಗೆದುಕೊಂಡರು.
ಇದನ್ನೂ ಓದಿ: ರಾಜ್ಯದ ದೇಗುಲಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರುತ್ತಾರಾ?- ಸರ್ಕಾರಕ್ಕೆ ಅರ್ಚಕರ ಒಕ್ಕೂಟ ನೀಡಿದ ಮನವಿಯಲ್ಲಿ ಏನೇನಿದೆ?
ಇದಕ್ಕೂ ಮುನ್ನ ಎಂಇಎಸ್ ಮಹಾಮೇಳಾವ್ ನಡೆಸಲು ಉದ್ದೇಶಿಸಿದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಎಡಿಜಿಪಿ ಅಲೋಕ್ ಕುಮಾರ್, ಪೆಂಡಾಲ್ ಹಾಕುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಎಲ್ಲಾ ವಸ್ತುಗಳನ್ನು ಸೀಜ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.