ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಅನಾವರಣಗೊಂಡಿತು. ಬಾವುಟಗುಡ್ಡೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು ಕೆದಂಬಾಡಿ ರಾಮಯ್ಯ ಗೌಡರು ಸೇರಿದಂತೆ ಕನ್ನಡ ನಾಡಿನಲ್ಲಿ ಆಗಿಹೋಗಿರುವ ಸಾಕಷ್ಟು ಜನ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಸ್ಮರಿಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಬೆಂಗಳೂರಿನಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಸ್ಥಾಪಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಜನರ ಬೆಂಬಲವೇ ನನ್ನ ಮುಂದಿನ ಹೋರಾಟಕ್ಕೆ ಶಕ್ತಿ – ಹೆಚ್.ಡಿ ಕುಮಾರಸ್ವಾಮಿ

ಕೆದಂಬಾಡಿ ರಾಮಯ್ಯಗೌಡರು ಸಂಘಟನಾ ಚತುರರಾಗಿದ್ದರು. ರೈತ ಹೋರಾಟಗಾರರ ಪಡೆಯನ್ನು ಕಟ್ಟಿಕೊಂಡು ಬ್ರಿಟಿಷರ ವಿರುದ್ಧ ಸಮರ ಸಾರಿದ್ದರು. ಅವರ ಪ್ರತಿಮೆ ಅನಾವರಣದ ವೇಳೆ ನನಗೆ ಇಂತಹ ಮಹಾನ್ ಸೇನಾನಿಗಳನ್ನು ಸ್ಮರಿಸಲು ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಸ್ಥಾಪಿಸುವ ಪ್ರೇರಣೆ ದೊರೆತಿದೆ ಎಂದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ ಸೇರಿದಂತೆ ಇತರ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

suddiyaana