ತೆರಿಗೆ ಭಾರ ಇಳಿಕೆ – ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಮೀಸಲು

ತೆರಿಗೆ ಭಾರ ಇಳಿಕೆ – ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಮೀಸಲು

2024ರ ಮೋದಿ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ಬಜೆಟ್​​​ ಮಂಡನೆ ಮಾಡಿದ್ದಾರೆ. ಇದರಲ್ಲೂ ವಿಶೇಷವಾಗಿ ಕೃಷಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒಟ್ಟು 1.52 ಲಕ್ಷ ಕೋಟಿ ರೂಪಾಯಿ ಮೀಸಲು ಇಡಲಾಗಿದೆ. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು ಈ ಬಜೆಟ್​​ನಲ್ಲಿ ನಿರ್ಧಾರ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಹಾಗೇ ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್ ಬಲಗೊಳಿಸಲಾಗುತ್ತಿದೆ.

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆ ಇಳಿಕೆ – ಯುವಕರಿಗೆ ಮೋದಿ ಬಂಪರ್ ಗಿಫ್ಟ್

ಪ್ರಮುಖವಾಗಿ ಆದಾಯ ತೆರಿಗೆಯಲ್ಲಿ ಬದಲಾವಣೆ ಮಾಡಲಾಗಿದೆ. ಈಗ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಲಾಗಿದೆ. ಈ ವ್ಯವಸ್ಥೆಯಲ್ಲಿ 3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. 3 ರಿಂದ 7 ಲಕ್ಷದವರೆಗಿನ ಆದಾಯದ ಮೇಲೆ ಶೇಕಡಾ 5 ರಷ್ಟು ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುವುದು,  ಈ ಮೂಲಕ ಶಿಕ್ಷಣಕ್ಕೂ ಮೋದಿ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲದ ನೆರವನ್ನು ಮೂರು ಶ್ರೇಣಿಗಳಲ್ಲಿ ಒದಗಿಸಲಾಗುತ್ತದೆ.  ಮೊದಲ ಶ್ರೇಣಿಯನ್ನು ಶಿಶು ಸಾಲ ಎಂದು ಕರೆಯಲಾಗುತ್ತದೆ. ಈ ಶ್ರೇಣಿಯಲ್ಲಿ ಯಾವುದೇ ಗ್ಯಾರಂಟಿ ಪಡೆಯದೇ 50,000 ರೂಪಾಯಿವರೆಗೆ ಸಾಲ ನೀಡಲಾಗುತ್ತದೆ. ಎರಡನೇ ಶ್ರೇಣಿ ಕಿಶೋರದಲ್ಲಿ 50,000 ರೂ.ಗಳಿಂದ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ. ಮೂರನೇ ತರುಣ ಶ್ರೇಣಿಯಲ್ಲಿ 5 ಲಕ್ಷದಿಂದ 10 ಲಕ್ಷದವರೆಗೆ ಸಾಲ  ಕೊಡಲಾಗುತ್ತಿತ್ತು. ಇದೀಗ ತರುಣ ಶ್ರೇಣಿ ಪ್ರಮಾಣ 5 ರಿಂದ 20 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಬಜೆಟ್ ಮಂಡನೆ ವೇಳೆ ಪರಿಸರ ಕಾಳಜಿಗೂ ಒತ್ತು ನೀಡಲಾಗಿದೆ. ಪರಿಸರದ ಹಿತದೃಷ್ಟಿಗೆ ಮಾರಕವಾದ ಪ್ಲಾಸ್ಟಿಕ್, ಫ್ಲೆಕ್ಸ್ ತೆರಿಗೆಯನ್ನು ಹೆಚ್ಚಿಸಲಾಗಿದೆ. ಇನ್ನು ಮಿತ್ರಪಕ್ಷಗಳ ರಾಜ್ಯಗಳಿಗೆ ಮೋದಿ ಬಂಪರ್ ಅನುದಾನ ನೀಡಿದ್ದಾರೆ. ಎನ್​ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ 15 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

Shwetha M

Leave a Reply

Your email address will not be published. Required fields are marked *