ಕೃಷಿ ಕ್ಷೇತ್ರಕ್ಕೆ ಕೈ ಕೊಟ್ಟ ಸಿದ್ದು! ಕುಡುಕರ ಕಿಕ್ ಹೆಚ್ಚಿಸಿದ ಬಜೆಟ್
ಬೆಂಗಳೂರಿಗೆ ಬೇಕಿತ್ತಾ ಸುರಂಗ?

ಕೃಷಿ ಕ್ಷೇತ್ರಕ್ಕೆ ಕೈ ಕೊಟ್ಟ ಸಿದ್ದು!  ಕುಡುಕರ ಕಿಕ್ ಹೆಚ್ಚಿಸಿದ ಬಜೆಟ್ಬೆಂಗಳೂರಿಗೆ ಬೇಕಿತ್ತಾ ಸುರಂಗ?

ಸಿದ್ದರಾಮಯ್ಯ ಅವರ ಈ ವರ್ಷದ ಬಜೆಟ್ ಮೇಲೆ ಹೆಚ್ಚು ನಿರೀಕ್ಷೆ ಇದಿದ್ದು ಕೃಷಿ ಕ್ಷೇತ್ರದ ಮೇಲೆ. ಹಾಗಿದ್ರೆ  ಸಿದ್ದರಾಯಯ್ಯ ಅವರ 17 ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?. ಎಣ್ಣೆ ಹೊಡೆಯವರ ಕಿಕ್ ಹೆಚ್ಚಿಸಿದ್ದೇಕೆ ಸಿದ್ದು? ಹಾಗೇ ಯಾವೆಲ್ಲಾ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿದೆ ಅನ್ನೋದ್ದನ್ನ ನೋಡೋಣ.

 

ಸಿರಿಧಾನ್ಯ ಉತ್ನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ 

ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ  2026ರ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ 

ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

  ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ   

ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ನೀಲಡಾಗುತ್ತದೆ. ಹಸು, ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ರೂ. ಮೀಸಲಿಡಲಾಗುವುದು, 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.10 ಕೋಟಿ ರೂ. ವೆಚ್ಚದಲ್ಲಿ 15 ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರಿನಲ್ಲಿ ಬೊಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪಿಸಲಾಗುವುದು. ಬಂಡೂರು ಕುರಿ ಸಂವರ್ಧನಾ ಕೇಂದ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

 ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಮೀಸಲು

 ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

  ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ

ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಹಂತ ಹಂತವಾಗಿ ಮದ್ಯದ ದರ ಏರಿಕೆಯಾಗಲಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮದ್ಯದ ಅಂಶವಿರುವ ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಣೆ 

ಮದ್ಯದ ಅಂಶವಿರುವ ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಣೆ ಮಾಡಲಾಗಿದೆ. ಪ್ರತಿ ಲೀಟರ್‌ನಲ್ಲಿ ಮದ್ಯದ ಅಂಶದ ಆದಾರದ ಮೇಲೆ ಅಬಕಾರಿ ಸುಂಕ ನಿರ್ಧಾರ ಮಾಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ.

 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಣ

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನ ಪ್ರೌಢ ಶಾಲೆಗಳನ್ನಾಗಿ ಹಾಗೂ  50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುತ್ತೆ

 

 ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ 

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸಕರ್ಲ್‌ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮನೆ ಇಲ್ಲದವರಿಗೆ ಮನೆ, ಕೆಲಸ ಇಲ್ಲದವರಿಗೆ ಕೆಲಸ

ವಸತಿರಹಿತರಿಗೆ ಮನೆಗಳು, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತಲ್ಲಣಗಳನ್ನು ನಿಭಾಯಿಸಲು ಸೂಕ್ತ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

 

ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ

ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ ಮಾಡುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.  ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್​ ವೇ ನಿರ್ಮಾಣ ಮಾಡಲಾಗುತ್ತದೆ.

 

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ 

 

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಸುದ್ದಿ ಷೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯ ನೀಡಲಾಗುತ್ತೆ

 

Gfx head:  ವಿವಿಧ ಇಲಾಖೆಗಳಿಗೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನವೆಷ್ಟು?

•       ಶಿಕ್ಷಣ ಇಲಾಖೆಗೆ – 47,224 ಕೋಟಿ ರೂ.

•       ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-  34,929 ಕೋಟಿ ರೂ.

•       ಇಂಧನ ಇಲಾಖೆ –  29,947 ಕೋಟಿ ರೂ.

•       ಗ್ರಾಮೀಣಾಭಿವೃದ್ಧಿ ಇಲಾಖೆ – 26,559 ಕೋಟಿ ರೂ.

•       ಜಲಸಂಪನ್ಮೂಲ ಇಲಾಖೆ – 22,436 ಕೋಟಿ ರೂ.

•       ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.

•       ಒಳಾಡಳಿತ ಮತ್ತು ಸಾರಿಗೆ ಇಲಾಖೆ – 23,100 ಕೋಟಿ ರೂ.

•       ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ –  17,817 ಕೋಟಿ ರೂ.

•       ಕಂದಾಯ ಇಲಾಖೆ – 19,843 ಕೋಟಿ ರೂ.

•       ಸಮಾಜ ಕಲ್ಯಾಣ ಇಲಾಖೆ –  18,612 ಕೋಟಿ ರೂ.

•       ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ

•       ಆಹಾರ ಇಲಾಖೆಗೆ – 7,942 ಕೋಟಿ ರೂ.

•       ಕೃಷಿ ಇಲಾಖೆ – 8,373 ಕೋಟಿ ರೂ.

•       ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ – 4,084 ಕೋಟಿ ರೂ.

•       ಇತರೆ ಇಲಾಖೆಗಳಿಗೆ ಒಟ್ಟು –  1,72,757 ಕೋಟಿ ರೂ.

 

Kishor KV

Leave a Reply

Your email address will not be published. Required fields are marked *