ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ಫೈನ್.. 5 ವರ್ಷ ಜೈಲು!

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ಫೈನ್.. 5 ವರ್ಷ ಜೈಲು!

ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಮಹತ್ವದ ಸುದ್ದಿಯೊಂದಿದೆ. ಇನ್ಮುಂದೆ ಎಲ್ಲೆಂದರಲ್ಲಿ ಕಸ ಸುಡೋ ಮುನ್ನ ಹುಷಾರ್.‌ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ಮಾಡಿದ್ದು, ಇನ್ನುಮುಂದೆ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಇದನ್ನೂ ಓದಿ: ಅಶ್ವಿನಿಯಿಂದ ಕಾಕ್ರೋಚ್‌ ಡಮ್ಮಿ ಆದ್ರಾ? – Elimination ಬೆನ್ನಲ್ಲೇ ಸುಧಿ ಪತ್ನಿ ಗರಂ!

ಐಟಿ ಸಿಟಿ, ಉದ್ಯಾನನಗರಿ ಎಂದು ಹೆಸರು ಗಳಿಸಿರುವ ಬೆಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಮೊದಲಿನಿಂದಲೂ ಇದೆ. ಕಂಡಕಂಡಲ್ಲಿ ಕಸ, ತ್ಯಾಜ್ಯ ಎಸೆಯುವುದು, ಖಾಲಿ ಸೈಟ್ ಗಳಲ್ಲಿ ಅಕ್ಕಪಕ್ಕದ ಮನೆಯವರು ತಂದು ಕಸ ಸುರಿಯುವುದು ಇತ್ಯಾದಿ ಸಮಸ್ಯೆ ಕಂಡುಬರುತ್ತಿದೆ. ಹೀಗೆ ರಸ್ತೆ ಬದಿಯಲ್ಲಿ ಖಾಲಿ ಸೈಟ್ ಗಳಲ್ಲಿ ಕಸ ಎಸೆಯುವವರ ಮೇಲೆ ಹದ್ದಿನ ಕಣ್ಣಿಟ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಷಲ್​ಗಳು ಇದೀಗ ಕಸ ಸುಡುವವರ ವಿರುದ್ಧವೂ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಕಸ ಸುಟ್ಟರೆ ವಾಯುಮಾಲಿನ್ಯ ಆಗಲಿದೆ. ಹೀಗಾಗಿ GBA ಹೊಸ ನಿಯಮ ಜಾರಿ ಮಾಡಿದ್ದು, ಕಸ ಸುಟ್ಟರೆ, ಪರಿಸರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಒಂದು ಲಕ್ಷ ರೂ.ವರೆಗೂ ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ನಿರ್ಧರಿಸಿದೆ.

ಇನ್ನೂ ಈ ಸಂಬಂಧ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಾರ್ವಜನಿಕರಿಗೆ ಕರೆ ನೀಡಿದ್ದು, ಕಸ ಸುಡುತ್ತಿರುವ ವಿಡಿಯೋ ಹಂಚಿಕೊಳ್ಳಲು ನಿರ್ಧರಿಸಿದೆ. ಕಸವನ್ನ ಸಂಸ್ಕರಣ ಘಟಕಕ್ಕೆ ಕಳುಹಿ, ವಿದ್ಯುತ್ ಉತ್ಪಾದಿಸಲಾಗುತ್ತದೆ. ಹೀಗಾಗಿ ಕಸ ಸುಡದಂತೆ ಎಚ್ಚರವಹಿಸಿ ನಿಯಮ ಉಲ್ಲಂಘಿಸಿದ್ರೆ ದಂಡ ವಿಧಿಸಲಾಗುವುದು ಎಂದು ಘನತ್ಯಾಜ್ಯ ನಿರ್ವಹಣಾ ಇಲಾಖೆ ತಿಳಿಸಿದೆ.

Shwetha M