ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್‌.. – 13 ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್‌.. – 13 ಮಂದಿ ಸಜೀವ ದಹನ

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್ಸಿನಲ್ಲಿದ್ದ 13 ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಸಂಭವಿಸಿದೆ.

ಗುನಾ – ಆರೋನ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬುಧವಾರ ರಾತ್ರಿ ವೇಳೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕ್ಷಣಾರ್ಧದಲ್ಲೇ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಸ್ಸಿನಲ್ಲಿದ್ದ   13 ಮಂದಿ ಸಜೀವ ದಹನಗೊಂಡಿದ್ದಾರೆ. ಭೀಕರ ಅಪಘಾತದಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಿಎಸ್ಐ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್ – ವಿಚಾರಣಾ ಆಯೋಗದಿಂದ ರಾಜಕಾರಣಿಗಳಿಗೆ ನೋಟಿಸ್

ಅಪಘಾತದಲ್ಲಿ ಗಾಯಗೊಂಡವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದ್ದು, ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಗುರುತು ಪತ್ತೆಹಚ್ಚಲು  ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M