ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ ನಂದಿನಿ ಅಸ್ತಿತ್ವಕ್ಕೆ ಕಾಂಗ್ರೆಸ್ ಧಕ್ಕೆ ತರುತ್ತಿದೆ – ಬಿಜೆಪಿ ಕಿಡಿ
ಬೆಂಗಳೂರು: ತಿರುಪತಿ ತಿಮ್ಮಪ್ಪ ದೇವಾಲಯದಲ್ಲಿ ಲಡ್ಡು ಪ್ರಸಾದ ತಯಾರಿಸಲು ಹಲವು ವರ್ಷಗಳಿಂದ ಕೆಎಂಎಫ್ ನಂದಿನಿ ತುಪ್ಪವನ್ನು ಪೂರೈಕೆ ಮಾಡುತ್ತಿತ್ತು. ಇನ್ನು ಮುಂದೆ ಲಡ್ಡು ತಯಾರಿಕೆಗೆ ನಂದಿನಿ ತುಪ್ಪವನ್ನು ಪೂರೈಕೆ ಮಾಡುವುದಿಲ್ಲ ಅಂತಾ ಹೇಳಿದೆ. ಇದೀಗ ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ. ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ಕಿಡಿಕಾರಿದೆ.
ಇದನ್ನೂ ಓದಿ: ತಿರುಪತಿಗೂ KMFಗೂ ಇದ್ದ ಸಂಬಂಧ ಕಡಿತ – ಇನ್ಮುಂದೆ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ನಂದಿನಿ ತುಪ್ಪ ಇರಲ್ಲ!
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಚುನಾವಣೆಗೂ ಮುನ್ನ ನಂದಿನಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಇಂದು ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ. ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ಕಿಡಿಕಾರಿದೆ.
ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರಕ್ಕೆ ಬಂದಾಗ ಲಾಭ-ನಷ್ಟದ ಲೆಕ್ಕ ಹೇಳುವ ಕಾಂಗ್ರೆಸ್ ಇದೇ ಸೂತ್ರವನ್ನು ಇತರ ಧರ್ಮಗಳಿಗೆ ಅನ್ವಯಿಸಲು ಒಪ್ಪುವುದಿಲ್ಲ. ಹಿಂದೂಗಳೆಡೆಗೆ ತಾತ್ಸಾರ ತಮ್ಮ ಜಾತ್ಯಾತೀತ ಸೂತ್ರ ಎಂಬುದನ್ನು ಸಿದ್ದರಾಮಯ್ಯ ಅವರು ಈಗ ಮತ್ತೆ ರುಜುವಾತು ಮಾಡಿದ್ದಾರೆ ಎಂದು ಆಕೋಶ ಹೊರಹಾಕಿದೆ.
ಇನ್ನು ಈ ವಿಚಾರವಾಗಿ ಬಿಜೆಪಿ ನಾಯಕ ಸಿ.ಟಿ ರವಿ ಕೂಡ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಅಸಮರ್ಥ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದಗಳು. ನಂದಿನಿ ಇನ್ನು ಮುಂದೆ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ತಯಾರಿಸಲು ತುಪ್ಪವನ್ನು ಪೂರೈಸುವುದಿಲ್ಲ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಂದಿನಿ ವಿಷಯವನ್ನು ನಾಚಿಕೆಯಿಲ್ಲದೆ ರಾಜಕೀಯ ಮಾಡಿ ಅಮುಲ್ ದೂಷಿಸಲು ಹಾಲುಣಿಸಿತು. ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಹಾಲಿನ ದರವನ್ನು ಹೆಚ್ಚಿಸಿತು. ಇದರಿಂದಾಗಿ ನಂದಿನಿಯು ಟಿಟಿಡಿ ಮಂಡಳಿಗೆ ತುಪ್ಪವನ್ನು ಹಿಂದಿನ ಬೆಲೆಗೆ ಪೂರೈಸಲು ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದ್ದಾರೆ.