ಅನ್ನಭಾಗ್ಯ ಯೋಜನೆಯಡಿ ಇಂದಿರಾ ಆಹಾರ ಕಿಟ್‌ – ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌

ಅನ್ನಭಾಗ್ಯ ಯೋಜನೆಯಡಿ ಇಂದಿರಾ ಆಹಾರ ಕಿಟ್‌  –  ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ  ʼಇಂದಿರಾ ಆಹಾರ ಕಿಟ್‌ʼ ವಿತರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಸದ್ಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ನುಮುಂದೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಇತರ ಆಹಾರ ಸಾಮಗ್ರಿ ನೀಡಲಾಗುತ್ತದೆ. ಇಂದಿರಾ ಆಹಾರ ಕಿಟ್‌ನಲ್ಲಿತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್‌ ಅಡುಗೆ ಎಣ್ಣೆ ಇರಲಿದೆ. ಈ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಇಂದಿರಾ ಆಹಾರ ಕಿಟ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್‌ ಅನ್ನು ಒದಗಿಸಲು ಬಜೆಟ್‌ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಗುಡ್‌ ನ್ಯೂಸ್‌

ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ಋತು ಚಕ್ರ ರಜೆ  ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಖುತು ಚಕ್ರ ರಜೆ ನೀತಿ 2025  ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಮಹಿಳಾ ಉದ್ಯೋಗಿಗಳಿಗೆ ವರ್ಷದಲ್ಲಿ 12 ದಿನ ವೇತನ ಸಹಿತ ರಜೆ ಸಿಗಲಿದೆ.

ಇದನ್ನೂ ಓದಿ: ಡೆಲ್ಲಿಯಿಂದ ಬಂದು ಅಪ್ಪನ ಆರೋಗ್ಯ ವಿಚಾರಿಸಿದ H.D.ಕುಮಾರಸ್ವಾಮಿ

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಕಂಪನಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ಯಾವ ದಿನ ರಜೆ ಪಡೆಬೇಕು ಎಂಬುವುದನ್ನು ಹೆಣ್ಣುಮಕ್ಕಳು ತೀರ್ಮಾನ ಮಾಡಬಹುದಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಸಂತೋಷ್‌ ಲಾಡ್ ಅವರು, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ನೀಡಲಾಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಆದಷ್ಟೂ ಬೇಗ ಕಾಯ್ದೆ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು.

Kishor KV