ಪೋರಬಂದರ್ನಲ್ಲಿ ವಿರುದ್ಧ ಯೋಗಿ ಆದಿತ್ಯನಾಥ್ ಟೀಕಾಪ್ರಹಾರ
ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರಚಾರದ ಅಬ್ಬರ
ಅಹಮದಾಬಾದ್: ಗುಜರಾತ್ನಲ್ಲೀಗ ಚುನಾವಣೆಯ ಪ್ರಚಾರದ ಅಬ್ಬರ ಜೋರಾಗಿಯೇ ಸಾಗುತ್ತಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಂಗಳವಾರ ಪೋರಬಂದರ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ, ಅಬ್ಬರದ ಪ್ರಚಾರ ಮಾಡಿದ್ರು. ಇದೇ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೋನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ : ‘ಏರ್ ಸುವಿಧಾ’ ನಿಯಮಗಳನ್ನು ಸಡಿಲಗೊಳಿಸಿದ ಕೇಂದ್ರ ಸರ್ಕಾರ
ಚುನಾವಣಾ ಪ್ರಚಾರಕ್ಕೆ ಬಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಪಕ್ಷದ ಅಭ್ಯರ್ಥಿ ಬಾಬುಭಾಯಿ ಬೋಖಿರಿಯಾ ಪರ ಗುಜರಾತ್ನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ಮಾಡಿದ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ಎಂದೂ ಜನಪರ ಕೆಲಸ ಮಾಡಲಿಲ್ಲ. ಅದಕ್ಕಾಗಿಯೇ ಜನರು ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಬಾಪು ಅವರ ಕಾಂಗ್ರೆಸ್ ಅನ್ನು ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ ಎಂದು ಹೇಳಿದರು.
ಗುಜರಾತ್ನ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ.