ಚನ್ನಪಟ್ಟಣ ಉಪ ಚುನಾವಣೆಗೆ ಕೌಂಟ್‌ಡೌನ್‌ – ಜೆಡಿಎಸ್ ಪಾಲಾದ ಮೈತ್ರಿ ಪಕ್ಷದ ಟಿಕೆಟ್

ಚನ್ನಪಟ್ಟಣ ಉಪ ಚುನಾವಣೆಗೆ ಕೌಂಟ್‌ಡೌನ್‌ – ಜೆಡಿಎಸ್ ಪಾಲಾದ ಮೈತ್ರಿ ಪಕ್ಷದ ಟಿಕೆಟ್

ಚನ್ನಪಟ್ಟಣ ಉಪಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಚುನಾವಣೆ ಘೋಷಣೆಗೂ ಮುನ್ನವೇ ಚುನಾವಣಾ ಅಖಾಡ ರಂಗೇರುತ್ತಿದೆ. ಜೆಡಿಎಸ್‌ ಹಾಗೂ ಬಿಜೆಪಿ ಮಧ್ಯೆ ಟಿಕೆಟ್‌ಗಾಗಿ ಫೈಟ್‌ ನಡೆಯುತ್ತಿತ್ತು. ಇದೀಗ ಕೊನೆಗೂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ  ಗೊಂದಲಕ್ಕೆ ಬಹುತೇಕ ತೆರೆ ಬಿದ್ದಿದ್ದು, ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಫಿಕ್ಸ್ ಆಗಿದೆ.

ಇದನ್ನೂ ಓದಿ: ಬಾಂಗ್ಲಾ ಚಾಲೆಂಜ್​ಗೆ KOHLI ರೆಡಿ – 4 ಇನ್ನಿಂಗ್ಸ್‌.. 152 ರನ್‌.. ಟಾಸ್ಕ್ ಏನು?

ಕಳೆದ ಹಲವು ದಿನಗಳಿಂದ ಸಿ.ಪಿ ಯೋಗೇಶ್ವರ್‌ ಚನ್ನಪಟ್ಟಣ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದರು. ಟಿಕೆಟ್‌ ನೀಡದಿದ್ದರೆ ಪಕ್ಷೇತರರಾಗಿ ಸ್ಪರ್ಧೆ ಮಾಡೋದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆಯಲ್ಲಿ ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಹೇಳಿಕೆಯಿಂದ ತೀವ್ರ ಸಮಾಧಾನಗೊಂಡಿದ್ದರು. ಹೀಗಾಗಿ ಸಿಪಿವೈಗೆ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಮಾಡಲು ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.  ಇದೀಗ ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರವನ್ನ ಬಿಟ್ಟುಕೊಡದಿರಲು ಜೆಡಿಎಸ್ ನಿರ್ಧಾರ ಮಾಡಿದೆ.

ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಆದ್ದರಿಂದ ಜೆಡಿಎಸ್ ನಿಂದ ಅಭ್ಯರ್ಥಿ ಕಣಗಿಳಿಸಿ ಮತ್ತೆ ಗೆಲುವಿನ ಬಾವುಟ ಹಾರಿಸಲು ಕುಮಾರಸ್ವಾಮಿ ಸಿದ್ದತೆ ನಡೆಸುತ್ತಿದ್ದಾರೆ. ಆದ್ರೆ ಸಿಪಿವೈ ಮುಂದಿನ ನಿರ್ಧಾರ ಏನು? ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರಾ ಅಥವಾ ಬಿಜೆಪಿ ಹೈಕಮಾಂಡ್‌ ನಿರ್ಧಾರಕ್ಕೆ ಬದ್ದರಾಗಿರ್ತಾರಾ ಅಂತಾ ಕಾದು ನೋಡ್ಬೇಕಾಗಿದೆ.

Shwetha M