ಕಾಲೇಜು ಶೌಚಗೃಹದಲ್ಲಿ ವಿದ್ಯಾರ್ಥಿನಿ ವಿಡಿಯೋ ಸೆರೆ ಪ್ರಕರಣ – ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
ಕರ್ನಾಟಕ ಕರಾವಳಿ ತೀರ ಉಡುಪಿಯ ಪ್ರತಿಷ್ಠಿತ ಕಾಲೇಜಿನ ಶೌಚಗೃಹದಲ್ಲಿ ಕ್ಯಾಮರಾ ಇಟ್ಟು ಹಿಂದೂ ಯುವತಿಯರ ವೀಡಿಯೋ ಸೆರೆಹಿಡಿದು ಅದನ್ನು ಅನ್ಯ ಧರ್ಮದ ಯುವಕರ ವಾಟ್ಸಾಪ್ ಗುಂಪುಗಳಿಗೆ ಹರಿಬಿಡಲಾಗುತ್ತಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ ಸಾಮಾಜಿಕ ಹೋರಾಟಗಾರ್ತಿಯ ಮನೆ ಸಿಬ್ಬಂದಿ ಮೇಲೆ ಪೊಲೀಸರು ವಿಚಾರಣೆ ನೆಪದಲ್ಲಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಹಿಂದೂ ಯುವತಿಯರ ಮೇಲೆ ಆಗಿರುವ ಪ್ರಕರಣವನ್ನು ಸರ್ಕಾರ ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.
ಇದನ್ನೂ ಓದಿ: ವಿದ್ಯಾರ್ಥಿನಿ ಸ್ನಾನ ಮಾಡುವಾಗ ಸಹಪಾಠಿಗಳಿಂದಲೇ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರಿಗೆ ಕಾಲೇಜಿಂದ ಗೇಟ್‌ಪಾಸ್..!
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ವ್ಯವಸ್ಥಿತವಾಗಿ ಹಳಿಯುವ ಮತ್ತು ಅವರ ಮೇಲೆ ಸರ್ಕಾರಿ ಯಂತ್ರ ದುರ್ಬಳಕೆ ಮಾಡಿ ಆಕ್ರಮಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ಕಿಡಿಕಾರಿದೆ.
ಉಡುಪಿಯ ಕಾಲೇಜಿನಲ್ಲಿ ನಡೆದ ಅಮಾನುಷ ಘಟನೆ ಬಗ್ಗೆ ಸುಮ್ಮನಿರುವ ಸರ್ಕಾರವನ್ನು ಪ್ರಶ್ನಿಸಿದ, ಹಿಂದೂ ವಿದ್ಯಾರ್ಥಿಗಳ ಪರ ಧ್ವನಿಯಾದ ಉಡುಪಿಯ ನಿವಾಸಿ ರಶ್ಮಿ ಸಾಮಂತ ಎಂಬುವವರ ಮನೆಗೆ ತುಘಲಕ್ ಸರ್ಕಾರವು ಪೊಲೀಸರನ್ನು ಕಳುಹಿಸಿ ಬೆದರಿಸುವ ಕೆಲಸ ಮಾಡಿದೆ. ಸುಳ್ಳು ಸುದ್ದಿ ಎಂಬ ವೃಥಾ ಆರೋಪ ಹೊರಿಸಿ ರಶ್ಮಿ ಸಾಮಂತರವರ ಮನೆಗೆ ರಾತ್ರೋ ರಾತ್ರಿ ಅಕ್ರಮವಾಗಿ ಪೊಲೀಸರು ನುಗ್ಗಿ ಕಿರುಕುಳ ನೀಡಲು ಯಾವ ಕಾನೂನಿನಲ್ಲಿ ಅವಕಾಶವಿದೆ.? ಯಾವ ನ್ಯಾಯಾಲಯದ ಮೂಲಕ ವಾರೆಂಟ್ ಪಡೆದು ಪೊಲೀಸರು ಪರಿಶೀಲನೆ ಹೆಸರಲ್ಲಿ ದಬ್ಬಾಳಿಕೆ ನಡೆಸಿದ್ದಾರೆ? ಎಂದು ಬಿಜೆಪಿ ಪ್ರಶ್ನಿಸಿದೆ.
ಒಂದು ಟ್ವೀಟ್ ಮೂಲಕ ಸತ್ಯವನ್ನು ಬಹಿರಂಗಪಡಿಸಿದರೆ ತುಘಲಕ್ ಸರ್ಕಾರದ ಕಣ್ಣು ಕೆಂಪಾಗಿದ್ದು ಏಕೆ.? ಸಿದ್ದರಾಮಯ್ಯನವರ ಸರ್ಕಾರ ಜಿಹಾದಿ ಮನಸ್ಥಿತಿಯ ಪಟಾಲಂಗಾಗಿ ಖುದ್ದು ಪೊಲೀಸರನ್ನು ಛೂ ಬಿಟ್ಟಿತ್ತೇ? ರಶ್ಮಿ ಪೋಷಕರಿಗೆ ರಾತ್ರಿ ವೇಳೆ ಪದೇ ಪದೆ ಕರೆ ಮಾಡಿ ಕಿರುಕುಳ ನೀಡಿದ್ದು ಕಾನೂನುಬಾಹಿರ..! ಒಲೈಕೆಗಾಗಿ ಸಿದ್ದರಾಮಯ್ಯರವರ ಸರ್ಕಾರ ಕಾನೂನು ಕೈಗೆತ್ತಿಕೊಂಡರೆ, ಯಾರೂ ಕೈಕಟ್ಟಿ ಕೂರುವುದಿಲ್ಲ. ನಿಮ್ಮ ವಿರುದ್ಧ ಹೋರಾಟ ಶತಸಿದ್ದ..! ಎಂದು ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ.