ವಾರಕ್ಕೆ ಮೂರು ದಿನ ಕಾವೇರಿ ಆರತಿ –  10,000 ಆಸನ ವ್ಯವಸ್ಥೆ.. ಟಿಕೆಟ್‌ ದರ ಎಷ್ಟು?  

ವಾರಕ್ಕೆ ಮೂರು ದಿನ ಕಾವೇರಿ ಆರತಿ –  10,000 ಆಸನ ವ್ಯವಸ್ಥೆ.. ಟಿಕೆಟ್‌ ದರ ಎಷ್ಟು?  

ಮಂಡ್ಯದಲ್ಲಿ ಕಾವೇರಿ ಆರತಿ ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧ‌ ಚರ್ಚೆಗಳು ನಡೆಯುತ್ತಿದೆ. ಇದೀಗ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ.  ವಾರಕ್ಕೆ ಮೂರು ದಿನ ಕಾವೇರಿ ಆರತಿ ನಡೆಯಲಿದೆ ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ENG ವಿರುದ್ಧ ರಿವೇಂಜ್ ಗೆ ರೆಡಿ – ಬುಮ್ರಾ ಔಟ್.. ಸಿಂಗ್ ಇನ್.. ಠಾಕೂರ್?

ಕಾವೇರಿ ಆರತಿ ಯೋಜನೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌,  ಸಚಿವರು, ಶಾಸಕರು, ರೈತ ಮುಖಂಡರ ಜೊತೆ ಸಭೆ ನಡೆಸಿ ಚರ್ಚಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ  ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗಲ್ಲ. ಕೆಆರ್‌ಎಸ್‌ನಲ್ಲಿ ಹೊಸ ರೂಪ ಕೊಡಲು ಪ್ರಾರಂಭ ಮಾಡಿದ್ದೇವೆ. ವಾರಕ್ಕೆ ಮೂರು ದಿನ ಕಾವೇರಿ ಆರತಿ ನಡೆಯಲಿದೆ. 10 ಸಾವಿರ ಆಸನಗಳ ವ್ಯವಸ್ಥೆ ಮಾಡುತ್ತೇವೆ. ಇದರಲ್ಲಿ 70% ಆಸನಗಳು ಉಚಿತ, 30% ಟಿಕೆಟ್ ಮಾಡ್ತೀವಿ ಎಂದು ಹೇಳಿದರು.

ಕೆಆರ್‌ಎಸ್‌ಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಬೇಕು, ಕಾವೇರಿಗೆ ನಮನ ಸಲ್ಲಿಸಲು ಸಾಕಷ್ಟು ಸಲಹೆಗಳು ಬಂದಿವೆ. ತಾಯಿ ಕಾವೇರಿಗೆ ಜಾತಿ, ಧರ್ಮ, ಬಣ್ಣ ಇಲ್ಲ, ಎಲ್ಲರ ಆಸ್ತಿ ಕಾವೇರಿ. ಕೆಲ ರೈತರು ಆತಂಕ ವ್ಯಕ್ತಪಡಿಸಿದರು. ಗೌರವಿಸಿ ಅವರ ಅಭಿಪ್ರಾಯವನ್ನು ಕೇಳಿದ್ದೇವೆ. ಡ್ಯಾಂಗೆ ತೊಂದರೆ ಆಗಬಹುದು ಎಂಬ ಆತಂಕ ರೈತರಿಗಿದೆ. ಆ ರೀತಿ ಆಗಲ್ಲ. ಕಾವೇರಿ ಆರತಿ ಯಾವ ರೀತಿ ನಡೆಯಲಿದೆ ಎಂಬುದನ್ನು ಇನ್ನೆರಡು ದಿನದಲ್ಲಿ ಬಿಡುಗಡೆ ಮಾಡುತ್ತೇನೆ. ಮೈಸೂರು, ಮಂಡ್ಯ, ಕೊಡಗು, ಮಂಗಳೂರು ಸಂಸ್ಕೃತಿಯನ್ನೂ ಸೇರಿಸುತ್ತೇವೆ. ಸ್ಥಳೀಯರಿಗೆ ಮಾತ್ರ ಆದ್ಯತೆ ಕೊಡಬೇಕು ಎಂದು ಸೂಚಿಸಿದ್ದೇವೆ ಎಂದು ಹೇಳಿದರು.

Shwetha M