ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ! – ಮತ್ತೆ ತಮಿಳುನಾಡಿಗೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ CWRC ಸೂಚನೆ

ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ! – ಮತ್ತೆ ತಮಿಳುನಾಡಿಗೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ CWRC ಸೂಚನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ. ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ  ಸೂಚನೆ ನೀಡಿದೆ.

ಇದನ್ನೂ ಓದಿ: ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ.. ಡಿ.6ರ ಬಳಿಕ ಎಲ್ಲ ವಿಚಾರ ತಿಳಿಸುತ್ತೇನೆ ಎಂದ ವಿ ಸೋಮಣ್ಣ

ಗುರುವಾರ ನಡೆದ ಸಭೆಯಲ್ಲಿ ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿದೆ. ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ಹಾಗೂ ಡಿಸೆಂಬರ್ ನ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿತ್ತು.

ತಮಿಳುನಾಡು ಮಂಡಿಸಿದ ವಾದಕ್ಕೆ ಕರ್ನಾಟಕ ಕೌಂಟರ್ ಕೊಟ್ಟಿದ್ದು, ಕರ್ನಾಟಕದಲ್ಲಿ ಈಗ ಬರ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದಾರೆ.

ಇನ್ನು ನವೆಂಬರ್ 3ರ ಸಭೆಯಲ್ಲಿ ತಮಿಳುನಅಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ನೀರು ಹರಿಸುವಂತೆ ಹೇಳಿದೆ. ಇದರಿಂದ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಲೇ ಇದೆ.

 

Shwetha M