ಡಿಕೆಶಿ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳ ದುರ್ಬಳಕೆ – ಡಿ.ಕೆ ಶಿವಕುಮಾರ್

ಡಿಕೆಶಿ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳ ದುರ್ಬಳಕೆ – ಡಿ.ಕೆ ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಕಲ ತಯಾರಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸಿಬಿಐ ಶಾಕ್ ಕೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಮಾಡಿದೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಚೇರ್ಮನ್ ಆಗಿದ್ದರೆ, ಪುತ್ರಿ ಐಶ್ವರ್ಯ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಕಾರ್ಯದರ್ಶಿಯಾಗಿದ್ದಾರೆ.

ಇದನ್ನೂ ಓದಿ :  ರಾಜಧಾನಿಯಲ್ಲಿ ಹೊಸವರ್ಷಕ್ಕೆ ಸಿದ್ಧತೆ- ಕ್ರಿಸ್‌ಮಸ್, ಹೊಸವರ್ಷಾಚರಣೆಗೆ ಪೊಲೀಸರಿಂದ ಗೈಡ್‌ಲೈನ್ಸ್

ತಮ್ಮ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ನಮ್ಮ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ಮಾಡಿದ್ದು, ನಮ್ಮ ಜಮೀನು, ವ್ಯವಹಾರದ ಸಂಬಂಧ ತನಿಖೆ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ತನಿಖಾ ಸಂಸ್ಥೆಗಳಿಂದ ನಿರಂತರ ಕಿರುಕುಳ ನೀಡುತ್ತಿದೆ. ಎಲ್ಲಾ ತನಿಖಾ ಸಂಸ್ಥೆಗಳು ದೂರು ದಾಖಲಿಸಿ ತನಿಖೆ ನಡೆಸುತ್ತಿವೆ. ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಭಯಪಡುವುದಿಲ್ಲ. ಸಿಬಿಐ ಅಧಿಕಾರಿಗಳು ನನ್ನ ಸಂಬಂಧಿಕರು, ವ್ಯವಹಾರಿಕ ಪಾಲುದಾರರಿಗೂ ನೋಟಿಸ್ ನೀಡಿ ಮಾಹಿತಿ ಪಡೆದಿದ್ದಾರೆ ಎಂದು ಸ್ಪಷ್ಟಪಡಿಸಿದರು. ವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಾಂಗ್ರೆಸ್‌ನವರಿಗೆ ತೊಂದರೆ ಕೊಡುವುದೇ ಮುಖ್ಯ ಉದ್ದೇಶವಾಗಿದೆ. ಐಟಿ, ಇಡಿ, ಸಿಬಿಐ ಮೂಲಕ ನಿರಂತರ ಕಿರುಕುಳ ನೀಡುತ್ತಿದ್ದಾರೆ. ನ್ಯಾಯಾಲಯ, ದೇವರ ಮೇಲೆ ಭಾರ ಹಾಕಿ ಮುನ್ನಡೆಯುತ್ತೇವೆ. ನಾನು ಯಾವುದೇ ತಪ್ಪು ಮಾಡದಿರುವುದರಿಂದ ಧೈರ್ಯವಾಗಿದ್ದೇನೆ’ ಎಂದಿದ್ದಾರೆ.

suddiyaana