ತಮಿಳುನಾಡು ದೇವಾಲಯಗಳಲ್ಲಿ ಮೊಬೈಲ್ ನಿಷೇಧ
ಮದ್ರಾಸ್ ಹೈಕೋರ್ಟ್ ನಿಂದ ಮಹತ್ವದ  ಆದೇಶ

ತಮಿಳುನಾಡು ದೇವಾಲಯಗಳಲ್ಲಿ ಮೊಬೈಲ್ ನಿಷೇಧಮದ್ರಾಸ್ ಹೈಕೋರ್ಟ್ ನಿಂದ ಮಹತ್ವದ  ಆದೇಶ

ಚೆನ್ನೈ: ತಮಿಳುನಾಡಿನಾದ್ಯಂತ ದೇವಸ್ಥಾನಗಳ ಒಳಭಾಗದಲ್ಲಿ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಮೊಬೈಲ್ ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ದೇವಾಲಯಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಸಲುವಾಗಿ ಮೊಬೈಲ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸುವ ಮಹತ್ವದ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿ ಭಾರತಕ್ಕೆ ಏನು ಮಾಡಬೇಕೆಂದು ಹೇಳಿಕೊಡುವ ಅಗತ್ಯವಿಲ್ಲ – ರುಚಿರಾ ಕಂಬೋಜ್

ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದ್ದಾರೆ.

ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಬಳಕೆಯಿಂದಾಗಿ ಹಲವು ತೊಂದರೆಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‍ಗಳನ್ನು ಸಮರ್ಪಕವಾಗಿ ಹೊರಗಿಟ್ಟು ಬರಲು ಭದ್ರತಾ ಲಾಕರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಅಲ್ಲದೇ ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಆದೇಶಿಸಿದೆ.

ಈಗಾಗಲೇ ಕೇರಳದ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ, ತಮಿಳುನಾಡಿನ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಮತ್ತು ಆಂಧ್ರಪ್ರದೇಶದ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಇದಲ್ಲದೇ ಮೊಬೈಲ್ ಡೆಪಾಸಿಟ್ ಮಾಡಲು ಭದ್ರತಾ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಅಳವಡಿಸಿಕೊಳ್ಳಿ. ದೇವಸ್ಥಾನದ ಆವರಣವನ್ನು ಪ್ರವೇಶಿಸುವ ಮೊದಲು ಫೋನ್‍ಗಳನ್ನು ಡೆಪಾಸಿಟ್ ಮಾಡುವಂತಹ ವ್ಯವಸ್ಥೆ ಮಾಡಿ ಎಂದು ಕೋರ್ಟ್ ತಿಳಿಸಿದೆ.

suddiyaana