ಕೋರ್ಟ್ ಮೆಟ್ಟಿಲೇರಿದ ‘ದಿ ಕೇರಳ ಸ್ಟೋರಿ’ – ಚಿತ್ರದ 10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

ಕೋರ್ಟ್ ಮೆಟ್ಟಿಲೇರಿದ ‘ದಿ ಕೇರಳ ಸ್ಟೋರಿ’ – ಚಿತ್ರದ 10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

‘ದಿ ಕೇರಳ ಸ್ಟೋರಿ’ ಸಿನಿಮಾದ ಟೀಸರ್ ಬಿಡುಗಡೆಯಾದಾಗಿನಿಂದಲೂ ಭಾರಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೈಲರ್ ಕೂಡ ಭಾರಿ ಚರ್ಚೆಯಲ್ಲಿದೆ. ಮೇ 5 ರಂದು ಚಿತ್ರ ಬಿಡುಗಡೆಯಾಗಲಿದ್ದು, ರಾಷ್ಟ್ರ ಮಟ್ಟದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಅಷ್ಟೇ ಅಲ್ಲದೇ ಒಂದು ವರ್ಗ ಈ ಚಿತ್ರವನ್ನು ನಿಷೇಧಿಸಬೇಕು ಅಂತಾ ಒತ್ತಾಯಿಸಿದ್ರೆ, ಇನ್ನೊಂದು ವರ್ಗ ಈ ಚಿತ್ರವನ್ನು ಯಾಕೆ ನಿಷೇಧಿಸಬೇಕು ಎಂದು ಪ್ರಶ್ನೆ ಮಾಡುತ್ತಿವೆ. ಇದೀಗ ಈ ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಇದನ್ನೂ ಓದಿ: ವಿವಾದದ ಸುಳಿಯಲ್ಲಿ ‘ದಿ ಕೇರಳ ಸ್ಟೋರಿ’ –  ಚಿತ್ರದಲ್ಲಿ ತೋರಿಸಿರುವ ಅಂಶ ಸಾಬೀತಾದ್ರೆ 1 ಕೋಟಿ ರೂ. ಬಹುಮಾನ!  

ಸುದೀಪ್ತೋ ಸೆನ್‌ ನಿರ್ದೇಶನದ ಮೂಡಿಬರುತ್ತಿರುವ ಚಿತ್ರವನ್ನು ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ ಈ ಅರ್ಜಿ ವಿಚಾರಣೆ ಮಾಡಲು ಸುಪ್ರೀಂ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೊಸೆಫ್ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆಯನ್ನು ನಿರಾಕರಿಸಿದ್ದು, ನೀವು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚಿಸಿದ್ದಾರೆ.

ಈ ಸಿನಿಮಾದಲ್ಲಿ ದ್ವೇಷ ಪೂರಿತ ಸಂಭಾಷಣೆ ಹಾಗೂ ಪ್ರೊಪೊಗಾಂಡ ಸಿನಿಮಾ ಎಂದು ವಕೀಲ ನಿಜಾಮ್ ಪಾಷಾ ವಾದಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ‘ನಿಮಗೆ ಹಾಗೆ ಅನಿಸಿದರೆ ನೀವು ಸಿನಿಮಾ ಸೆನ್ಸಾರ್ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ ಎಂದು ತಿಳಿಸಿದೆ.

ಸಿನಿಮಾ ನಿಷೇಧ ಮಾಡುವಂತೆ ಸಿಪಿಎಂ ನೇತೃತ್ವದ ಎಲ್‌ಡಿಎಫ್, ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಒತ್ತಾಯಿಸುತ್ತಿವೆ. ಇದರ ಜತೆಗೆ ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್‌ ಈಗಾಗಲೇ ಸಿನಿಮಾ ನಿಷೇಧದ ಬಗ್ಗೆ ಮಾತನಾಡಿದ್ದಾರೆ. ಈ ನಡುವೆ ಸಿನಿಮಾಕ್ಕೆ ಸೆನ್ಸಾರ್‌ ಬೋರ್ಡ್‌ ʼಎʼ ಸರ್ಟಿಫಿಕೇಟ್‌ ನೀಡಿ, 10 ದೃಶ್ಯಗಳಿಗೆ ಕತ್ತರಿ ಹಾಕಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಸಿನಿಮಾವನ್ನು ನೋಡಿ, ʼಎʼ ಸರ್ಟಿಫಿಕೇಟ್‌ ನೀಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ 32 ಸಾವಿರ ಹಿಂದೂ ಹೆಣ್ಣು ಮಕ್ಕಳನ್ನು ಇಸ್ಲಾಂಗೆ ಮತಾಂತರ ಮಾಡಿ ಮದುವೆ ಮಾಡಿರುವ ಬಗ್ಗೆ ತೋರಿಸಲಾಗಿದೆ. ಅಲ್ಲದೇ ಅಂಥ ಹೆಣ್ಣು ಮಕ್ಕಳನ್ನು ಐಸಿಸ್‌ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎಂದು ತೋರಿಸಲಾಗಿದೆ. ಆದರೆ ವಾಸ್ತವದಲ್ಲಿ ಇದ್ಯಾವುದೂ ನಡೆದಿಲ್ಲ. ಬರೀ ಹಸಿ ಸುಳ್ಳುಗಳನ್ನೇ ನಿಜವೆಂಬಂತೆ ಚಿತ್ರದಲ್ಲಿ ಬಿಂಬಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯವನ್ನು ಗುರಿ ಮಾಡಿಕೊಂಡು ಸುಳ್ಳು ಕಥೆ ಮೇಲೆ ಸಿನಿಮಾ ಮಾಡಲಾಗಿದೆ. ರಾಜಕೀಯ ಮತ ಧ್ರುವೀಕರಣಕ್ಕೆ ಆರೆಸ್ಸೆಸ್‌ ಸೃಷ್ಟಿಸಿರುವ ಕಟ್ಟು ಕಥೆ. ಕೋಮು ಸಾಮರಸ್ಯದ ರಾಜ್ಯದಲ್ಲಿ ಹಿಂದೂಗಳ ಧ್ರುವೀಕರಣಕ್ಕೆ ಸುಳ್ಳು ಕಥೆ ಸೃಷ್ಟಿಸಲಾಗಿದೆ. ರಾಜ್ಯದ ಜಾತ್ಯತಿತ ವ್ಯವಸ್ಥೆಯನ್ನು ಬುಡಮೇಲು ಮಾಡಲು, ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸಲಾಗುತ್ತಿದೆ ಎಂಬುದು ಸಿನಿಮಾ ವಿರೋಧಿಸುತ್ತಿರುವ ಕಾಂಗ್ರೆಸ್‌ ಹಾಗೂ ಕೆಲ ಸಂಘ ಸಂಸ್ಥೆಗಳ ವಾದವಾಗಿದೆ.

suddiyaana