ಗೃಹ ಬಳಕೆ ಸಿಲಿಂಡರ್ ದರ ಕೊಂಚ ಇಳಿಕೆ – ಉಜ್ವಲ ಯೋಜನೆ ಫಲಾನುಭವಿಗಳಿಗೆ 200 ರೂ ಸಬ್ಸಿಡಿ ಘೋಷಣೆ

ಗೃಹ ಬಳಕೆ ಸಿಲಿಂಡರ್ ದರ ಕೊಂಚ ಇಳಿಕೆ – ಉಜ್ವಲ ಯೋಜನೆ ಫಲಾನುಭವಿಗಳಿಗೆ 200 ರೂ ಸಬ್ಸಿಡಿ ಘೋಷಣೆ

ಗೃಹ ಬಳಕೆ ಸಿಲಿಂಡರ್ ದರ 200 ರೂಪಾಯಿ ಇಳಿಸುವ ಮೂಲಕ ಕೇಂದ್ರ ಸರ್ಕಾರ ಮಧ್ಯಮ ವರ್ಗದ ಜನರಿಗೆ ಸ್ವಲ್ಪ ರಿಲೀಫ್ ನೀಡಿದೆ. ಹಲವಾರು ವರ್ಷಗಳ ಹಿಂದೆ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸಿದೆ.

ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದ್ದು, ದೇಶದ 33 ಕೋಟಿ ಎಲ್‌ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂದ ವಾರ್ಷಿಕ ಒಟ್ಟು ಸುಮಾರು 10,000 ಕೋಟಿ ರೂ. ಆರ್ಥಿಕ ಹೊರೆಯಾಗಲಿದ್ದು, ಈ ವರ್ಷದ ಉಳಿಕೆ ಅವಧಿಗೆ 7,680 ಕೋಟಿ ರೂಪಾಯಿ ವೆಚ್ಚವಾಗಲಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಎಲ್ಲಾ ಗ್ರಾಹಕರಿಗೆ 200 ರೂಪಾಯಿಯಷ್ಟು ಇಳಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇದನ್ನೂ ಓದಿ: 100 ದಿನಗಳಲ್ಲಿ ಕಾಂಗ್ರೆಸ್‌ ನ ನೂರೆಂಟು ಕರ್ಮಕಾಂಡಗಳು! – ಸರಣಿ ಟ್ವೀಟ್‌ ಮೂಲಕ ಬಿಜೆಪಿ ವ್ಯಂಗ್ಯ

ಉಜ್ವಲ ಯೋಜನೆಯಡಿ ಇನ್ನೂ 75 ಲಕ್ಷ ಮಂದಿಗೆ ಉಚಿತ ಅನಿಲ ಸಂಪರ್ಕವನ್ನು ಕಲ್ಪಿಸಿಕೊಡಲಾಗುತ್ತದೆ. ಉಜ್ವಲ ಗ್ರಾಹಕರು ಪ್ರತಿ ಸಿಲಿಂಡರ್‌ಗೆ ಒಟ್ಟು 400 ರೂಪಾಯಿ ಸಬ್ಸಿಡಿ ಪಡೆಯಲಿದ್ದಾರೆ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಕೆಲ ವರ್ಷಗಳ ಹಿಂದೆ ಗ್ರಾಹಕರ ಬ್ಯಾಂಕ್ ಖಾತೆಗೆ LPG ಸಬ್ಸಿಡಿ ಹಣ ಪಾವತಿಸುವುದನ್ನು ನಿಲ್ಲಿಸಿತ್ತು.

suddiyaana