ಜಮ್ಮು ಕಾಶ್ಮೀರ ನ್ಯಾಷನಲ್​ ಫ್ರಂಟ್​ ಅನ್ನು 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರ

ಜಮ್ಮು ಕಾಶ್ಮೀರ ನ್ಯಾಷನಲ್​ ಫ್ರಂಟ್​ ಅನ್ನು 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರ

ಜಮ್ಮು ಕಾಶ್ಮೀರದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್​ ಅನ್ನು ನಿಷೇಧಿಸಿದೆ. ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುತ್ತಿರುವ ಕಾರಣಕ್ಕಾಗಿ ಜಮ್ಮುವಿನಲ್ಲಿ 5 ವರ್ಷ ಬ್ಯಾನ್‌ ಮಾಡಲಾಗಿದೆ.

ಇದನ್ನೂ ಓದಿ: ಆಧಾರ್ ಅಪ್​ಡೇಟ್ ಮಾಡಲು ಗಡುವು ಮತ್ತೆ ವಿಸ್ತರಣೆ – ಜೂನ್ 14ಕ್ಕೆ ಕೊನೆ ದಿನ

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಹುರಿಯತ್ ಕಾನ್ಫರೆನ್ಸ್‌ನ ಅಂಗ ಸಂಸ್ಥೆ JKNF ಅನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘ” ಎಂದು ಕೇಂದ್ರ ಗೃಹ ಸಚಿವಾಲಯವು ಘೋಷಿಸಿದೆ. JKNF ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಎಂದು ಸರ್ಕಾರ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುವ ಮೂಲಕ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲವನ್ನು ನೀಡುವ ಮೂಲಕ ಭಯೋತ್ಪಾದಕ ಚಟುವಟಿಕೆಗಳು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ JKNF ಸದಸ್ಯರು ತೊಡಗಿಸಿಕೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.

JKNF ಸದಸ್ಯರು ‘ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದಾರೆ’ ಹೀಗಾಗಿ ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

Shwetha M