ಡಿಕೆ.ಶಿವಕುಮಾರ್‌ಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ – ಡಿಸಿಎಂ ದೊಡ್ಡ ಕನಸಿಗೆ ಬ್ರೇಕ್!

ಡಿಕೆ.ಶಿವಕುಮಾರ್‌ಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ – ಡಿಸಿಎಂ ದೊಡ್ಡ ಕನಸಿಗೆ ಬ್ರೇಕ್!

ರಾಮನಗರ ಜಿಲ್ಲೆ ಹೆಸರನ್ನು ಮರು ನಾಮಕರಣ ಮಾಡ್ಬೇಕು ಅನ್ನೋ ಡಿಸಿಎಂ ಡಿ.ಕೆ ಶಿವಕುಮಾರ್‌ ಕನಸಿಗೆ ಈಗ ಕೇಂದ್ರ ಸರ್ಕಾರ ಬ್ರೇಕ್‌ ಹಾಕಿದೆ. ಜಿಲ್ಲೆಯ ಹೆಸರು ಬದಲಾವಣೆ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಇದನ್ನೂ ಓದಿ: ಮೀನು ಕೊಟ್ಟು ಪ್ರಪೋಸ್‌ ಮಾಡ್ತಾರಾ?- ಅಭಿಜ್ಞಾ ಮಾತು ಫುಲ್‌ ಟ್ರೋಲ್!‌ 

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ಜಿಲ್ಲೆ ಎಂದು ಬದಲಾವಣೆ ಮಾಡಲು ರಾಜ್ಯದ ಕ್ಯಾಬಿನೆಟ್‌ನಲ್ಲಿ ತೀರ್ಮಾನ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳಿಸಲಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ತವರು ಜಿಲ್ಲೆಯ ಹೆಸರು ಬದಲಾವಣೆಗೆ ನಿರ್ಧರಿಸಿದ್ದರು. ಆದರೆ ರಾಜ್ಯ ಸರ್ಕಾರದ ಈ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಲು ಹಿಂದೇಟು ಹಾಕಿದೆ.

ಕೆಲ ಕಾಲ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯ ಪ್ರಸ್ತಾವವನ್ನು ಮುಂದುವರಿಸಬೇಡಿ ಎಂದಿರುವ ಕೇಂದ್ರ ಸರ್ಕಾರ ತನ್ನ ಈ ನಿರ್ಧಾರಕ್ಕೆ ಯಾವುದೇ ನಿರ್ದಿಷ್ಟ ಕಾರಣವನ್ನು ಕೊಟ್ಟಿಲ್ಲ. ಡಿ.ಕೆ ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ.

ಈ ಹಿಂದೆ ಕರ್ನಾಟಕ ಸರ್ಕಾರ ಬಿಜಾಪುರ ಜಿಲ್ಲೆಯ ಹೆಸರನ್ನು ವಿಜಯಪುರ, ಗುಲ್ಬರ್ಗಾ ಜಿಲ್ಲೆಯ ಹೆಸರು ಅನ್ನು ಕಲ್ಬುರ್ಗಿ ಎಂದು ಬದಲಾಯಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರದ ಗೃಹ ಇಲಾಖೆಯಿಂದ ಜಿಲ್ಲೆ, ನಗರಗಳ ಹೆಸರು ಬದಲಾವಣೆಗೆ ಒಪ್ಪಿಗೆ ಸಿಕ್ಕಿತ್ತು.

Shwetha M